Shocking Accident | ಕ್ಯಾಂಟರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಆ್ಯಂಬುಲೆನ್ಸ್, ಭಾರಿ ಅನಾಹುತವೊಂದು ಕೂದಲೆಳೆಯಲ್ಲಿ ಪಾರು!

ಹಂಚಿಕೊಳ್ಳಿ

ನೆಲಮಂಗಲ: ತಾಲೂಕಿನ ಕುಣಿಗಲ್ ಬೈಪಾಸ್ ಬಳಿ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ.

ಹಾಸನ ಕಡೆಯಿಂದ ಬೆಂಗಳೂರಿನತ್ತ ಆಸ್ಪತ್ರೆಗೆ ತೆರಳುತ್ತಿದ್ದ ಈ ಆ್ಯಂಬುಲೆನ್ಸ್, ಮಾರ್ಗಮಧ್ಯೆ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ಕ್ಯಾಂಟರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಆ್ಯಂಬುಲೆನ್ಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಆದರೂ, ಆ್ಯಂಬುಲೆನ್ಸ್‌ನಲ್ಲಿದ್ದ ರೋಗಿ, ಚಾಲಕ ಹಾಗೂ ಇತರರಿಗೆ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದು ನೆಮ್ಮದಿಯ ಸಂಗತಿ. ಅಪಘಾತದಲ್ಲಿ ಕ್ಯಾಂಟರ್ ವಾಹನಕ್ಕೂ ಅಲ್ಪ ಪ್ರಮಾಣದ ಹಾನಿಯಾಗಿದೆ.

ಸ್ಥಳೀಯರ ಸಮಯಪ್ರಜ್ಞೆ: ಅಪಘಾತ ಸಂಭವಿಸಿದ ಕ್ಷಣಮಾತ್ರದಲ್ಲಿಯೇ ಸ್ಥಳಕ್ಕಾಗಮಿಸಿದ ಸಾರ್ವಜನಿಕರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ಆ್ಯಂಬುಲೆನ್ಸ್‌ನಲ್ಲಿದ್ದ ರೋಗಿಯನ್ನು ಅತ್ಯಂತ ಸುರಕ್ಷಿತವಾಗಿ ಹೊರತೆಗೆದು, ತಕ್ಷಣವೇ ಬೇರೊಂದು ವಾಹನಕ್ಕೆ ಸ್ಥಳಾಂತರಿಸಿ ಮುಂದಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಸ್ಥಳೀಯರ ಈ ಕಾರ್ಯತತ್ಪರತೆ ಹಾಗೂ ಸಮಯಪ್ರಜ್ಞೆಯಿಂದಾಗಿ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

Leave a Reply

Your email address will not be published. Required fields are marked *

Advertisement


This will close in 3 seconds