CM ಆದ ಬಳಿಕ ಸ್ವಕ್ಷೇತ್ರ ಕನಕಪುರಕ್ಕೆ ಡಿ.ಕೆ.ಶಿವಕುಮಾರ್ ಮೊದಲ ಭೇಟಿ: ಸಾರ್ವಜನಿಕರ ಟ್ರಾಫಿಕ್ ಕಿರಿಕಿರಿ ತಪ್ಪಿಸಲು Metroದಲ್ಲಿ ಪ್ರಯಾಣ!

ಹಂಚಿಕೊಳ್ಳಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಅವರು ಇಂದು (ಜೂನ್ 7) ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲಾ ಪ್ರವಾಸ ಕೈಗೊಂಡಿರುವ ಅವರು, ಹಾರೋಹಳ್ಳಿ ಮತ್ತು ಕನಕಪುರ ತಾಲೂಕುಗಳಲ್ಲಿ ಆಯೋಜಿಸಿರುವ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಮೆಟ್ರೋ ಮೊರೆ

ಮುಖ್ಯಮಂತ್ರಿಗಳ ಭೇಟಿ ಹಾಗೂ ಸಂಚಾರದ ಸಂದರ್ಭದಲ್ಲಿ ನೀಡಲಾಗುವ ‘ಜೀರೋ ಟ್ರಾಫಿಕ್’ (Zero Traffic) ಸೌಲಭ್ಯದಿಂದ ಸಾರ್ವಜನಿಕ ವಾಹನ ಸವಾರರಿಗೆ ಉಂಟಾಗುವ ಅನಗತ್ಯ ತೊಂದರೆಯನ್ನು ತಪ್ಪಿಸುವ ಉದ್ದೇಶದಿಂದ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಅವರು ವಿಧಾನಸೌಧದ ಮೆಟ್ರೋ ನಿಲ್ದಾಣದಿಂದ ಕನಕಪುರ ರಸ್ತೆವರೆಗೂ ‘ನಮ್ಮ ಮೆಟ್ರೋ’ದಲ್ಲಿ (Namma Metro) ಪ್ರಯಾಣಿಸಲಿದ್ದಾರೆ.

ಕನಕಪುರ ರಸ್ತೆ ತಲುಪಿದ ಬಳಿಕ, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ತಮ್ಮ ಕ್ಷೇತ್ರ ಪ್ರವಾಸವನ್ನು ಮುಂದುವರಿಸಲಿದ್ದಾರೆ. ದಿನವಿಡೀ ತಮ್ಮ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಇಂದು ರಾತ್ರಿ ಅವರು ಮತ್ತೆ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಮುಖ್ಯಮಂತ್ರಿಗಳ ಪ್ರವಾಸದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾರೋಹಳ್ಳಿ ಹಾಗೂ ಕನಕಪುರ ಕ್ಷೇತ್ರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Leave a Reply

Your email address will not be published. Required fields are marked *

Advertisement


This will close in 3 seconds