Karnataka Monsoon | ರಾಜ್ಯದಲ್ಲಿ ಕೊನೆಗೂ ಚುರುಕಾದ ಮುಂಗಾರು: ಇಂದಿನಿಂದ 3 ದಿನ ಭಾರಿ ಮಳೆ

ಹಂಚಿಕೊಳ್ಳಿ

ಬೆಂಗಳೂರು: ರಾಜ್ಯದಲ್ಲಿ ಜೂನ್ 12ರ ವರೆಗೂ ತೀವ್ರ ಕೊರತೆ ಎದುರಿಸುತ್ತಿದ್ದ ಮುಂಗಾರು ಮಳೆ (Monsoon) ಕೊನೆಗೂ ಚುರುಕುಗೊಂಡಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಇಂದಿನಿಂದ (ಜೂನ್ 13) ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದಲೇ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಮಳೆರಾಯನ ಅಬ್ಬರ ಆರಂಭವಾಗಲಿದೆ.

ಹವಮಾನ ಇಲಾಖೆಯ ವರದಿಯ ಪ್ರಕಾರ, ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಅತ್ಯಂತ ಜೋರು ಮಳೆಯಾಗುವ ಸಾಧ್ಯತೆ ಇದೆ. ಇನ್ನು ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಲಘು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ತಡವಾಗಿಯಾದರೂ ಮುಂಗಾರು ಚುರುಕಾಗಿರುವುದು ರೈತಾಪಿ ವಲಯದಲ್ಲಿ ನಿರಾಳತೆ ತಂದಿದೆ.

Leave a Reply

Your email address will not be published. Required fields are marked *

Advertisement


This will close in 3 seconds