ಬೆಂಗಳೂರು: ರಾಮನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಎ. ಇಕ್ಬಾಲ್ ಹುಸೇನ್ (Iqbal Hussain) ಅವರಿಗೆ ದಿಢೀರ್ ಹೃದಯಘಾತ (Heart Attack) ಸಂಭವಿಸಿದ್ದು, ಅವರನ್ನು ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೈದ್ಯರ ತೀವ್ರ ನಿಗಾದಲ್ಲಿ ಶಾಸಕರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಬೆಳಿಗ್ಗೆ ಇಕ್ಬಾಲ್ ಹುಸೇನ್ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ತಕ್ಷಣವೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಪ್ರಾಥಮಿಕ ತಪಾಸಣೆ ನಡೆಸಿದ ವೈದ್ಯರು ಇದು ಮೈಲ್ಡ್ ಹಾರ್ಟ್ ಅಟ್ಯಾಕ್ ಎಂದು ದೃಢಪಡಿಸಿದ್ದು, ಸೂಕ್ತ ವೈದ್ಯಕೀಯ ಚಿಕಿತ್ಸೆ ಹಾಗೂ ಮುಂದಿನ ಸರ್ಜರಿ ಅಥವಾ ಆಂಜಿಯೋಪ್ಲಾಸ್ಟಿ ಪ್ರಕ್ರಿಯೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಶಾಸಕರಿಗೆ ಹೃದಯಘಾತವಾಗಿರುವ ವಿಷಯ ತಿಳಿಯುತ್ತಿದ್ದಂತೆ ಅವರ ಕುಟುಂಬಸ್ಥರು, ರಾಜಕೀಯ ಮುಖಂಡರು ಹಾಗೂ ನೂರಾರು ಸಂಖ್ಯೆಯ ಬೆಂಬಲಿಗರು ತೀವ್ರ ಆತಂಕಗೊಂಡಿದ್ದು, ಆಸ್ಪತ್ರೆಯತ್ತ ಧಾವಿಸುತ್ತಿದ್ದಾರೆ. ಸದ್ಯ ಶಾಸಕರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.


Leave a Reply