ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ.!

ಹಂಚಿಕೊಳ್ಳಿ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಮುಂಗಾರು ಮಾರುತಗಳು (Monsoon) ಕೊಂಚ ದುರ್ಬಲಗೊಂಡಿದ್ದರೂ, ರಾಜ್ಯದ ಹಲವೆಡೆ ಮುಂದಿನ ಕೆಲವು ಗಂಟೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು (Rain Forecast) ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಪ್ರಮುಖವಾಗಿ ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ (Moderate Rainfall) ಎಂದು ಅಂದಾಜಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಮಡಿಕೇರಿಯಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *

Advertisement


This will close in 3 seconds