ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಹರಿದು ಗಾರೆ ಕಾರ್ಮಿಕ ದುರ್ಮ*ರಣ!

ಹಂಚಿಕೊಳ್ಳಿ

ಬೆಂಗಳೂರು: ರಾಜಧಾನಿಯ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗನಹಳ್ಳಿ ಕ್ರಾಸ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಿಎಂಟಿಸಿ (BMTC) ಎಲೆಕ್ಟ್ರಿಕ್ ಬಸ್‌ವೊಂದು ಹರಿದ ಪರಿಣಾಮ ನಡೆದುಕೊಂಡು ಹೋಗುತ್ತಿದ್ದ 58 ವರ್ಷದ ಗಾರೆ ಕಾರ್ಮಿಕರೊಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ಮೃತರನ್ನು ರಾಜು (58) ಎಂದು ಗುರುತಿಸಲಾಗಿದ್ದು, ಇವರು ವೃತ್ತಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದರು. ನಿನ್ನೆ ಸಂಜೆ 6 ಗಂಟೆಯ ಸುಮಾರಿಗೆ ಜ್ಞಾನಭಾರತಿ ಮಂಗನಹಳ್ಳಿ ಕ್ರಾಸ್ ಬಳಿ ರಾಜು ಅವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ವೇಗವಾಗಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಇವರ ಮೇಲೆಯೇ ಹರಿದಿದೆ. ಬಸ್ ಚಕ್ರದಡಿ ಸಿಲುಕಿದ ರಾಜು ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಅಪಘಾತದ ಹಿನ್ನೆಲೆಯಲ್ಲಿ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯ (Jnanabharathi Traffic Police Station) ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

Advertisement


This will close in 3 seconds