ನಾಳೆ ದೇಶಾದ್ಯಂತ NEET UG ಮರು ಪರೀಕ್ಷೆ: 28 ಲಕ್ಷ ವಿದ್ಯಾರ್ಥಿಗಳು ಭಾಗಿ, ಅಕ್ರಮ ತಡೆಯಲು ಅಭೇದ್ಯ ಭದ್ರತೆ

ಹಂಚಿಕೊಳ್ಳಿ

ನಾಳೆ ದೇಶಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನೀಟ್ ಯುಜಿ (NEET UG) ಮರು ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯ ಸುಗಮ ಹಾಗೂ ಸುರಕ್ಷಿತ ನಿರ್ವಹಣೆಗಾಗಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಭದ್ರತಾ ಕ್ರಮಗಳ ಪರಿಶೀಲನೆಗಾಗಿ ಇಂದು ಬೆಳಿಗ್ಗೆ 9:00 ಗಂಟೆಯಿಂದ ಸಂಜೆಯವರೆಗೆ ರಾಷ್ಟ್ರವ್ಯಾಪಿ ಅಣಕು ಕವಾಯತು ನಡೆಯಲಿದ್ದು, ಇದರಲ್ಲಿ 2.5 ಲಕ್ಷಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಪರೀಕ್ಷಾ ಕೇಂದ್ರಗಳು ಹಾಗೂ ಅಭ್ಯರ್ಥಿಗಳ ವಿವರ

ಈ ಬಾರಿಯ ನೀಟ್ ಪರೀಕ್ಷೆಗಾಗಿ ಅಭ್ಯರ್ಥಿಗಳು ಭಾರಿ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡಿದ್ದು, ಪರೀಕ್ಷಾ ಪ್ರಕ್ರಿಯೆಯ ಸುಗಮ ನಿರ್ವಹಣೆಗೆ ಬೃಹತ್ ವ್ಯವಸ್ಥೆ ಮಾಡಲಾಗಿದೆ.

ಅಕ್ರಮ ತಡೆಯಲು ಸಮರೋಪಾದಿಯ ಭದ್ರತೆ

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮಗಳನ್ನು ತಡೆಯಲು ಸರ್ಕಾರ ಯುದ್ಧದ ಮಾದರಿಯಲ್ಲಿ ಕಟ್ಟುನಿಟ್ಟಿನ ಭದ್ರತೆ ಕಲ್ಪಿಸಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಸಿಆರ್‌ಪಿಎಫ್ (CRPF) ಯೋಧರು ಮತ್ತು ಪೊಲೀಸ್ ಭದ್ರತೆ ಒದಗಿಸಲಾಗುತ್ತಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ಕಣ್ಗಾವಲು ಇಡಲಾಗುತ್ತಿದೆ. ಕೇಂದ್ರದ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅನಧಿಕೃತ ವ್ಯಕ್ತಿಗಳ ಪ್ರವೇಶ, ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ಸಾಧನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪರೀಕ್ಷಾ ಸಿಬ್ಬಂದಿಗೆ ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ ಮಾಡಲಾಗಿದೆ. ಅಭ್ಯರ್ಥಿಗಳು ಮತ್ತು ಸಿಬ್ಬಂದಿಗೆ ಮೆಟಲ್ ಡಿಟೆಕ್ಟರ್ ಮೂಲಕ ತಪಾಸಣೆ ನಡೆಸಿದ ನಂತರವೇ ಕೇಂದ್ರದೊಳಗೆ ಪ್ರವೇಶ ನೀಡಲಾಗುತ್ತದೆ. ಅಲ್ಲದೆ, ಜಿಪಿಎಸ್ (GPS) ವ್ಯವಸ್ಥೆ ಹೊಂದಿರುವ ಪೊಲೀಸ್ ಬೆಂಗಾವಲು ವಾಹನಗಳ ಮೂಲಕ ಪ್ರಶ್ನೆ ಪತ್ರಿಕೆಗಳನ್ನು ಭದ್ರತಾ ಪಡೆಗಳ ಕಾವಲಿನಲ್ಲಿ ಅತ್ಯಂತ ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗುತ್ತಿದೆ.

ನಕಲಿ ಪ್ರಶ್ನೆಪತ್ರಿಕೆ ಜಾಲ ಬೇಧಿಸಿದ ಪೊಲೀಸರು

ದೇಶಾದ್ಯಂತ ಕಟ್ಟೆಚ್ಚರ ವಹಿಸಿರುವ ನಡುವೆಯೇ, ರಾಜಸ್ಥಾನದ ಬಿಲ್ವಾರದಲ್ಲಿ ಟೆಲಿಗ್ರಾಂ (Telegram) ಆಪ್ ಮೂಲಕ ನಕಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಲು ಯತ್ನಿಸಿದ 21 ವರ್ಷದ ಆಕಾಶ್ ಚೌದರಿ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮಗಳಿಗೆ ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

Advertisement


This will close in 3 seconds