ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ.!

ಬೆಂಗಳೂರು: ರಾಜಧಾನಿಯ ರಾಜರಾಜೇಶ್ವರಿ ನಗರದಲ್ಲಿ (RR Nagar) ಭಾರಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಕನ್ನಡದ ಖ್ಯಾತ ನಟಿ ಕೃಷಿ ತಾಪಂಡ (Krishi Thapanda) ಅವರ ನಿವಾಸದಲ್ಲಿ ಅವರ ಗೆಳೆಯ ಹಾಗೂ ಉದ್ಯಮಿ ವೈಶಾಕ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಉದ್ಯಮಿ ವೈಶಾಕ್ ಅವರು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ನೋಡಿಕೊಂಡು ಈ ತೀವ್ರ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರ್‌ಆರ್‌ ನಗರದ ಪೊಲೀಸ್ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ರವಾನಿಸಲಾಗಿದೆ.

ವೈಶಾಕ್ ಅವರ ಈ ದಿಢೀರ್ ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಕೃಷಿ ತಾಪಂಡ ಹಾಗೂ ವೈಶಾಕ್ ಅವರ ಆಪ್ತರಿಂದ ಮಾಹಿತಿ ಕಲೆಹಾಕುತ್ತಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Leave a Reply

Your email address will not be published. Required fields are marked *