Renukaswamy ಕೊ*ಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಹಾಕಿದ್ದ ಮೂವರು ಆರೋಪಿಗಳು ಜುಲೈ 7ರವರೆಗೆ ಪೊಲೀಸ್ ಕಸ್ಟಡಿಗೆ

ಹಂಚಿಕೊಳ್ಳಿ

ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ, ಪ್ರಕರಣದ ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ್ದ ಮೂವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸಾಕ್ಷ್ಯ ನಾಶ ಹಾಗೂ ಸಾಕ್ಷಿದಾರರ ಮೇಲೆ ಪ್ರಭಾವ ಬೀರಲು ಯತ್ನಿಸಿದ ಆರೋಪದ ಮೇಲೆ ಈ ಮೂವರನ್ನು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ.

​ಬಂಧಿತ ಮೂವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು 50ನೇ ಎಸಿಜೆಎಂ (ACJM) ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಈ ವೇಳೆ, ಬೆದರಿಕೆ ಹಾಕಲು ಆರೋಪಿಗಳಿಗೆ ಸೂಚನೆ ನೀಡಿದವರು ಯಾರು ಮತ್ತು ಇದರ ಹಿಂದಿರುವ ರೂವಾರಿ ಯಾರು ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಬೇಕಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಅಲ್ಲದೆ, ಸ್ಥಳ ಮಹಜರು ಪ್ರಕ್ರಿಯೆ ನಡೆಸಲು ಹಾಗೂ ಬೆದರಿಕೆ ಜಾಲದ ಹಿಂದಿನ ಸತ್ಯಾಸತ್ಯತೆಯನ್ನು ಬಯಲಿಗೆಳೆಯಲು ಆರೋಪಿಗಳ ವಿಚಾರಣೆ ಅತ್ಯಗತ್ಯವಾಗಿರುವುದರಿಂದ ಕಸ್ಟಡಿಗೆ ನೀಡುವಂತೆ ಕೋರಿದರು.

​ಪೊಲೀಸರ ವಾದವನ್ನು ಆಲಿಸಿದ 50ನೇ ಎಸಿಜೆಎಂ ನ್ಯಾಯಾಲಯವು, ಪ್ರಕರಣದ ಗಾಂಭೀರ್ಯತೆ ಹಾಗೂ ತನಿಖೆಯ ಅಗತ್ಯತೆಯನ್ನು ಪರಿಗಣಿಸಿ ಹೆಚ್ಚಿನ ವಿಚಾರಣೆ ನಡೆಸಲು ಅನುಮತಿ ನೀಡಿದೆ. ತನಿಖೆಗೆ ಸಹಕರಿಸುವ ನಿಟ್ಟಿನಲ್ಲಿ ಬಂಧಿತ ಮೂವರು ಆರೋಪಿಗಳನ್ನು ಜುಲೈ 7ರವರೆಗೆ ಕಾಮಾಕ್ಷಿಪಾಳ್ಯ ಪೊಲೀಸರ ಕಸ್ಟಡಿಗೆ ವಹಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಈ ವಿಚಾರಣೆಯಿಂದ ಪ್ರಕರಣದ ಕುರಿತು ಮತ್ತಷ್ಟು ಸ್ಫೋಟಕ ಸತ್ಯಗಳು ಹೊರಬೀಳುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *

Advertisement


This will close in 3 seconds