ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ: ಶಾಸಕ ಭೀಮಣ್ಣ ನಾಯ್ಕ

ಹಂಚಿಕೊಳ್ಳಿ

ಸಿದ್ದಾಪುರ: ತಾಲೂಕಿನ ರೈತರ ಮತ್ತು ಜಾನುವಾರುಗಳ ಹಿತರಕ್ಷಣೆಗಾಗಿ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ಅವರು ಸಿದ್ದಾಪುರದ ಪಶು ಆಸ್ಪತ್ರೆ ಆವರಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯವಲಯ ಯೋಜನೆಯಡಿ, ಅರ್ಹ ರೈತ ಫಲಾನುಭವಿಗಳಿಗೆ ರಬ್ಬರ್ ನೆಲಹಾಸು (Rubber Mats) ವಿತರಿಸಿ ಮಾತನಾಡಿದರು.
ದನಕರುಗಳ ಆರೋಗ್ಯ ರಕ್ಷಣೆ ಮತ್ತು ಹಟ್ಟಿಯ ಸ್ವಚ್ಛತೆಯನ್ನು ಕಾಪಾಡುವಲ್ಲಿ ರಬ್ಬರ್ ನೆಲಹಾಸುಗಳು ಅತ್ಯಂತ ಉಪಯುಕ್ತವಾಗಿವೆ. ರೈತರು ಇಂತಹ ಯೋಜನೆಗಳ ಸದುಪಯೋಗವನ್ನು ಪಡೆದುಕೊಂಡು ಆರ್ಥಿಕವಾಗಿ ಮತ್ತಷ್ಟು ಸಬಲರಾಗಬೇಕು ಎಂದು ಶಾಸಕರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಪಶುಪಾಲನಾ ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕಿನ ಹಲವಾರು ರೈತ ಫಲಾನುಭವಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Advertisement


This will close in 3 seconds