
ಕರಾವಳಿಯ ಮಲೆನಾಡಿನ ಜಿಲ್ಲೆಗಳಲ್ಲಿ ನಿನ್ನೆ ಉತ್ತಮ ಮಳೆಯಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಬಾಗಲಕೋಟೆ ಬಿಜಾಪುರ ಬೀದರ್ ಯಾದಗಿರಿ ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 153mm ಗರಿಷ್ಠ ಮಳೆಯಾಗಿದೆ.
ಇವತ್ತಿನ ಮುನ್ಸೂಚನೆ ಪ್ರಕಾರ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮೋಡ – ನಿರಂತರ ತುಂತುರು ಮಳೆಯ ವಾತಾವರಣ ಮುಂದುವರೆಯಲಿದೆ. ಕರಾವಳಿ ತೀರಗಳ ತಾಲ್ಲೂಕುಗಳಲ್ಲಿ ಮತ್ತು ಘಟ್ಟಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಭಾರತದ ಸರ್ಕ್ಯುಲೇಷನ್ ಪ್ರಭಾವದಿಂದ ಮುಂಗಾರು ಚುರುಕಾಗಿದ್ದು ಸಾಮಾನ್ಯ ಮಳೆ ಈ ವಾರ ಮುಂದುವರೆಯಬಹುದು.
ಮಲೆನಾಡಿನ ಶಿವಮೊಗ್ಗ ಚಿಕ್ಕಮಗಳೂರು ಕೊಡಗು ಜಿಲ್ಲೆಗಳ ಕರಾವಳಿಗೆ ಸಮೀಪದ ಘಟ್ಟಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ತಾಲ್ಲೂಕುಗಳಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಬದಲಾದ ಮುನ್ಸೂಚನೆ ಪ್ರಕಾರ ಜುಲೈ ಕೊನೆ ತನಕ ಸಾಮಾನ್ಯ ಮಳೆ ಮುಂದುವರೆಯಬಹುದು.
ದಕ್ಷಿಣ ಒಳನಾಡಿನ ರಾಮನಗರ ಕೋಲಾರ ಚಿಕ್ಕಬಳ್ಳಾಪುರ ಮಂಡ್ಯ ಬೆಂಗಳೂರು – ಗ್ರಾಮಾಂತರ, ತುಮಕೂರು ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ಮೈಸೂರು ದಾವಣಗೆರೆ ಚಿತ್ರದುರ್ಗ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ತುಂತುರು – ಸಾಮಾನ್ಯ ಮಳೆಯಾಗಬಹುದು.
ಉತ್ತರ ಒಳನಾಡಿನ ಬೆಳಗಾವಿ ಧಾರವಾಡ ಹಾವೇರಿ ಬಾಗಲಕೋಟೆ ಬಿಜಾಪುರ ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಮತ್ತು ಬೀದರ್ ಕಲ್ಬುರ್ಗಿ ಯಾದಗಿರಿ ರಾಯಚೂರು ಬಳ್ಳಾರಿ ಜಿಲ್ಲೆಗಳ ತೆಲಂಗಾಣ ಗಡಿಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.
ಉತ್ತರ ಭಾರತದಲ್ಲಿ ಮಧ್ಯಮ ಸ್ಥರದ ಗಾಳಿಯ ಸರ್ಕ್ಯುಲೇಷನ್ ಗಳ ಕಾರಣದಿಂದ ಮುಂಗಾರು ಚುರುಕಾಗಿದ್ದು ಮಹಾರಾಷ್ಟ್ರ ಕರಾವಳಿ ಮತ್ತು ಕೊಂಕಣ ತೀರಗಳಲ್ಲಿ ಇವತ್ತು ಭಾರೀ ಮಳೆಯ ಮುನ್ಸೂಚನೆ ಇದೆ. ಕೇರಳ ಕರ್ನಾಟಕದಲ್ಲಿಯೂ ಮಳೆಯಾಗಲಿದ್ದು, ಕಳೆದ ವಾರ ಹವಾಮಾನ ವೈಪರೀತ್ಯದ ಕಾರಣದಿಂದ ಮಳೆ ಆರಂಭವಾಗಿದ್ದು ಜುಲೈ 31 ತನಕವು ಸಾಮಾನ್ಯ ಮಳೆ ಮುಂದುವರೆಯುವ ಮುನ್ಸೂಚನೆ ಇದೆ.










Leave a Reply