ಜನಸಾಮಾನ್ಯರಿಗೆ ಗುಡ್ ನ್ಯೂಸ್: ವಾಟ್ಸ್ಆಪ್‌ನಲ್ಲೇ ಸಿಗಲಿದೆ ಜಾತಿ ಪ್ರಮಾಣಪತ್ರ!

ಹಂಚಿಕೊಳ್ಳಿ

ಬೆಂಗಳೂರು: ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಕಂದಾಯ ಇಲಾಖೆಯ ಸೇವೆಗಳನ್ನು ಸುಲಭವಾಗಿ ತಲುಪಿಸಲು  ಮಹತ್ವದ ನಿರ್ಣಯವೊಂದು ಕೈಗೊಂಡಿದೆ. ಇನ್ನು ಮುಂದೆ ಜಾತಿ ಪ್ರಮಾಣಪತ್ರಕ್ಕಾಗಿ ಕಚೇರಿಗಳಿಗೆ ಹೋಗುವ ಅಗತ್ಯವಿಲ್ಲ. ಮೊಬೈಲ್‌ಗೆ ಬರುವ ವಾಟ್ಸ್ಆಪ್ ಅಥವಾ ಮೆಸೇಜ್ ಮೂಲಕವೇ   ಜಾತಿ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ಉದ್ಘಾಟಸಿದೆ.

ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಅವರ ಉಪಸ್ಥಿತಿಯಲ್ಲಿ ಕಂದಾಯ ಇಲಾಖೆಯ ಮನೆ ಮನೆಗೆ ಉಚಿತ ಜಾತಿ ಪ್ರಮಾಣಪತ್ರ ವಿತರಣೆ ವಿಶೇಷ ಅಭಿಯಾನ ಹಾಗೂ ಶಾಶ್ವತ ನಿವಾಸ ಪ್ರಮಾಣಪತ್ರ ಸೇವೆಗೆ ಚಾಲನೆ ನೀಡಿದರು.

ಈ ಯೋಜನೆಯಲ್ಲಿ ರಾಜ್ಯದಾದ್ಯಂತ ಸುಮಾರು 4.84 ಕೋಟಿ ಡಿಜಿಟಲ್ ಜಾತಿ ಪ್ರಮಾಣಪತ್ರಗಳನ್ನು   ಜಿಲ್ಲಾಧಿಕಾರಿಗಳಿಗೆ ಒದಗಿಸಲಾಗಿದೆ. ಜಿಲ್ಲಾಡಳಿತವು ಅವುಗಳನ್ನು ಮುದ್ರಿಸಿ ಸಾರ್ವಜನಿಕರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಕಾರ್ಯ ನಡೆಸಲಿದೆ.

ಇದಲ್ಲದೆ, ಈಗಾಗಲೇ ಸುಮಾರು 86 ಲಕ್ಷ ಜಾತಿ ಪ್ರಮಾಣ ಪತ್ರಗಳನ್ನು ಸಾರ್ವಜನಿಕರ ಮೊಬೈಲ್ ಸಂಖ್ಯೆಗೆ ಸೇರಸಲಾಗಿದ್ದು   ಇದರಿಂದ ವಾಟ್ಸ್ಆಪ್ ಅಥವಾ ಎಸ್‌ಎಂಎಸ್ ಮೂಲಕ ಸುರಕ್ಷಿತ ಲಿಂಕ್ ಸ್ವೀಕರಿಸಿ, ನಾಗರಿಕರು ತಮ್ಮ ಜಾತಿ ಪ್ರಮಾಣಪತ್ರವನ್ನು 00 ಶುಲ್ಕದೊಂದಿಗೆ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಸಾರ್ವಜನಿಕರ ಅನುಕೂಲಕ್ಕಾಗಿ  ವೆಬ್‌ಪೋರ್ಟಲ್ ಮೂಲಕವೂ ಜಾತಿ ಪ್ರಮಾಣಪತ್ರಗಳನ್ನು ಉಚಿತವಾಗಿ ಡೌನ್‌ಲೋಡ್ ಮಾಡಿಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಪ್ರತಿ ಗ್ರಾಮ ಹೋಬಳಿ ಮಟ್ಟದಲ್ಲಿ ಉಚಿತ ಮುದ್ರಣ ಸಹಾಯ ಕೇಂದ್ರಗಳನ್ನೂ ತೆರೆಯಲಾಗುವುದು.

ಇದರೊಂದಿಗೆ ರಾಜ್ಯದಲ್ಲಿ ಮೊದಲ ಬಾರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ  ಸೇವೆಯನ್ನೂ ಆರಂಭಿಸಲಾಗಿದೆ. ನಾಗರಿಕರು ಹತ್ತಿರದ ನಾಡಕಚೇರಿ, ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಬಾಪೂಜಿ ಸೇವಾ ಕೇಂದ್ರ ಅಥವಾ ಅಧಿಕೃತ ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಈ ಪ್ರಮಾಣಪತ್ರವನ್ನು ಸ್ವೀಕರಿಸಬಹುದಾಗಿದೆ.

Leave a Reply

Your email address will not be published. Required fields are marked *