ಯಲ್ಲಾಪುರ, ಜುಲೈ 22 : ವಿಶೇಷ ಮತದಾರರ ತೀವ್ರ ಪರಿಷ್ಕರಣೆ (ಎಸ್.ಐ.ಆರ್.) ಅಭಿಯಾನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಬುಧವಾರ ಕಿರವತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖಾರೇವಾಡ, ಹೊಸಳ್ಳಿ, ಕಿರವತ್ತಿ, ಗ್ರೀನ್ ಸರ್ಕಲ್ ಹಾಗೂ ಜಯಂತಿನಗರ ಬೂತ್‌ಗಳಲ್ಲಿ ಜಾಗೃತಿ ಸಭೆಗಳನ್ನು ನಡೆಸಿದರು.
ಸಭೆಗಳಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಪ್ರಭುತ್ವದ ಅತ್ಯಂತ ಮಹತ್ವದ ಪ್ರಕ್ರಿಯೆಯಾಗಿದ್ದು, ಅರ್ಹ ಪ್ರತಿಯೊಬ್ಬ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಈಗಾಗಲೇ ನೋಂದಾಯಿತರಾಗಿರುವ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯವಿದ್ದಲ್ಲಿ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಎಸ್.ಐ.ಆರ್. ಅಭಿಯಾನವನ್ನು ಯಶಸ್ವಿಗೊಳಿಸಲು ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ವಿವೇಕ್ ಹೆಬ್ಬಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಎಸ್. ಭಟ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಎಸ್.ಐ.ಆರ್. ಬ್ಲಾಕ್ ಉಸ್ತುವಾರಿಯಾದ ಎನ್.ಕೆ. ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ರವಿ ಭಟ್ ಬರಗದ್ದೆ, ತಾಲೂಕು ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರಾದ ಮಾಕು ಕೊಕರೆ, ಕಿರವತ್ತಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ರೆಹಮತ್ ಅಬ್ಬಿಗೇರಿ, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷರಾದ ರಾಘವೇಂದ್ರ ಗೊಂದಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.














Leave a Reply