ಮಗನ ರೋಮಾಂಚನದ ಡ್ರೈವಿಂಗ್; ಮಾಲೀಕನಿಗೆ ಕೋರ್ಟಿನಿಂದ ಜೈಲು ಟ್ರೈನಿಂಗ್!

ಹಂಚಿಕೊಳ್ಳಿ

ಶಿರಸಿ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ವಾಹನ ಚಲಾಯಿಸಲು ಅವಕಾಶ ನೀಡಿದ ಪ್ರಕರಣದಲ್ಲಿ ವಾಹನ ಮಾಲಕರಿಗೆ ಶಿರಸಿಯ ನ್ಯಾಯಾಲಯವು 26,500 ರೂ. ದಂಡ ಹಾಗೂ 2 ದಿನಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ.
ನಗರದ ಬಿಡ್ಕಿ ಸರ್ಕಲ್ ಬಳಿ ಶಿರಸಿ ಟ್ರಾಫಿಕ್ ಪೊಲೀಸ್ ಠಾಣೆಯ ಪಿಎಸ್‌ಐ ದೇವೇಂದ್ರ ನಾಯ್ಕ
ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸ್ಕೂಟರ್‌ವೊಂದನ್ನು ತಡೆದು ಪರಿಶೀಲಿಸಿದರು. ಈ ಸಂದರ್ಭದಲ್ಲಿ ವಾಹನ ಚಲಾಯಿಸುತ್ತಿದ್ದವರು ಅಪ್ರಾಪ್ತ ವಯಸ್ಸಿನ ಬಾಲಕರಾಗಿರುವುದು ಬೆಳಕಿಗೆ ಬಂದಿತು. ಈ ಹಿನ್ನೆಲೆಯಲ್ಲಿ ವಾಹನ ಮಾಲಕರ ವಿರುದ್ಧ ಶಿರಸಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ತನಿಖೆ ಪೂರ್ಣಗೊಳಿಸಿ ದೋಷಾರೋಪಣಾ ಪತ್ರವನ್ನು ಶಿರಸಿಯ 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ 3ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಸಲಾಯಿತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಜು. 22ರಂದು ವಾಹನ ಮಾಲಕರನ್ನು ತಪ್ಪಿತಸ್ಥರೆಂದು ಘೋಷಿಸಿ 26,500 ರೂ. ದಂಡ ಹಾಗೂ 2 ದಿನಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ.

Leave a Reply

Your email address will not be published. Required fields are marked *