ನವದೆಹಲಿ: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ನೀಟ್ (NEET-UG) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿವಾದಕ್ಕೆ ಸಂಬಂಧಿಸಿದಂತೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಶಿಫಾರಸಿನ ಮೇರೆಗೆ, ಹಾಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದು, ಪ್ರಹ್ಲಾದ್ ಜೋಶಿ ಅವರ ನೇಮಕಾತಿಗೆ ಅಧಿಕೃತ ಮುದ್ರೆ ಒತ್ತಿದ್ದಾರೆ.














Leave a Reply