ಹತ್ತಾರು ಜೆಸಿಬಿ ಹಾಗೂ ಟ್ರಾಕ್ಟರ್ ಗಳೊಂದಿಗೆ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು!! ಕೆಲಕಾಲ ಉದ್ವಿಘ್ನ ಸ್ಥಿತಿ ನಿರ್ಮಾಣ ? ಎಲ್ಲಿ ಓದಿ ಈ ವರದಿ

ಹಂಚಿಕೊಳ್ಳಿ

ಶಿರಸಿ: ತಾಲೂಕಿನ ಗೋಳಿಕಟ್ಟಾದ ಕಾಮಧೇನು ಹಾಲು ಮತ್ತು ಹಣ್ಣು ಸಂಸ್ಕರಣಾ ಸಹಕಾರಿ ಸಂಘದ ಲೀಸ್ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್ ಆದೇಶದಂತೆ ಅರಣ್ಯ ಇಲಾಖೆ ಭಾನುವಾರ ಮುಂಜಾನೆ ನಡೆಸಿದ ಕಾರ್ಯಾಚರಣೆ ಕೆಲಕಾಲ ರೈತರ ತೀವ್ರ ವಿರೋಧಕ್ಕೆ ಕಾರಣವಾಯಿತು. ಹತ್ತಾರು ಜೆಸಿಬಿ ಹಾಗೂ ಟ್ರ್ಯಾಕ್ಟರ್‌ಗಳೊಂದಿಗೆ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಜಾಗವನ್ನು ತಮ್ಮ ಸುಪರ್ದಿಗೆ ಪಡೆಯುವ ಪ್ರಕ್ರಿಯೆ ಆರಂಭಿಸಿದರು.
ಭಾನುವಾರ ಬೆಳಿಗ್ಗೆ ಸುಮಾರು 5 ಗಂಟೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಮೊದಲ ಹಂತವಾಗಿ ಖಾಲಿ ಜಾಗದಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ಕೆ ಚಾಲನೆ ನೀಡಿದರು. ಅರಣ್ಯ ಇಲಾಖೆಯ ಈ ಕಾರ್ಯಾಚರಣೆ ಗಮನಕ್ಕೆ ಬರುತ್ತಿದ್ದಂತೆ ಸ್ಥಳೀಯ ರೈತರು ಸ್ಥಳಕ್ಕೆ ಆಗಮಿಸಿ ತೀವ್ರ ವಿರೋಧ ವ್ಯಕ್ತಪಡಿಸಿದರು. ಧಾರವಾಡ ಹೈಕೋರ್ಟ್‌ನ ಆದೇಶದಂತೆ ಅರಣ್ಯ ಜಾಗವನ್ನು ಇಲಾಖೆಯ ಸುಪರ್ದಿಗೆ ಪಡೆಯಲಾಗುತ್ತಿದೆ. ನ್ಯಾಯಾಲಯದ ನಿರ್ದೇಶನದ ಅನ್ವಯವೇ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಸಹಕರಿಸುವಂತೆ ಅಧಿಕಾರಿಗಳು ರೈತರ ಮನವೊಲಿಸಲು ಪ್ರಯತ್ನಿಸಿದರು. ಬಳಿಕ ಮಾತಿನ ಚಕಮಕಿ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಸ್ಥಳದಲ್ಲಿದ್ದ ಡಿಎಸ್ಪಿ ಗೀತಾ ಪಾಟೀಲ, ಸಿಪಿಐ ಇ.ಸಿ.ಸಂಪತ್ ನೇತೃತ್ವದಲ್ಲಿ ಸಿಬ್ಬಂದಿ ಮುಂಜಾಗ್ರತೆ ಕ್ರಮ ಕೈಗೊಂಡರು.
ಅರಣ್ಯ ಇಲಾಖೆ ಮುಂಜಾನೆಯೇ ಹತ್ತಾರು ಜೆಸಿಬಿ ಹಾಗೂ ಟ್ರ್ಯಾಕ್ಟರ್‌ಗಳನ್ನು ಸ್ಥಳಕ್ಕೆ ತರಿಸಿತ್ತು. ಜಾಗವನ್ನು ಸ್ವಾಧೀನಕ್ಕೆ ಪಡೆಯುವ ಪ್ರಕ್ರಿಯೆಯ ಭಾಗವಾಗಿ ಸ್ಥಳ ಪರಿಶೀಲನೆ ನಡೆಸಿ, ಗಿಡಗಳನ್ನು ನಾಟಿ ಮಾಡುವ ಮೂಲಕ ಅರಣ್ಯ ಇಲಾಖೆಯ ಸುಪರ್ದಿಗೆ ಪಡೆಯುವ ಕಾರ್ಯ ಆರಂಭಿಸಲಾಯಿತು.

Leave a Reply

Your email address will not be published. Required fields are marked *