
ಯಲ್ಲಾಪುರ: ಇಲ್ಲಿನ ವಿಕಾಸ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಕಳೆದ ಆರ್ಥಿಕ ಸಾಲಿನಲ್ಲಿ ಒಟ್ಟು ₹72.91 ಲಕ್ಷ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಮುರಳಿ ಹೆಗಡೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕು ವರ್ಷದಿಂದ ವರ್ಷಕ್ಕೆ ಉತ್ತಮ ಪ್ರಗತಿ ಸಾಧಿಸುತ್ತಿದೆ. ಆಧುನಿಕ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳುವಲ್ಲಿ ಬ್ಯಾಂಕ್ ಮುಂಚೂಣಿಯಲ್ಲಿದೆ ಎಂದರು. ಸದ್ಯ ಗ್ರಾಹಕರಿಗೆ ಎ.ಟಿ.ಎಂ., ಸಿ.ಡಿ.ಎಂ., ಇ-ಕಾಮರ್ಸ್, ಪಿ.ಒ.ಎಸ್. ಮತ್ತು ಮೊಬೈಲ್ ಬ್ಯಾಂಕಿಂಗ್ ಸೇರಿದಂತೆ ಹಲವು ಡಿಜಿಟಲ್ ಸೇವೆಗಳನ್ನು ಒದಗಿಸಲಾಗುತ್ತಿದೆ. ಶೀಘ್ರದಲ್ಲೇ ಅತ್ಯಾಧುನಿಕ ಯು.ಪಿ.ಐ. (UPI) ಸೇವೆಯನ್ನು ಆರಂಭಿಸಲು ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಆಗಸ್ಟ್ 27 ರಂದು ಮಹಾಸಭೆ:
ಬ್ಯಾಂಕಿನ ವಾರ್ಷಿಕ ಸರ್ವಸಾಧಾರಣ ಸಭೆಯು ಪಟ್ಟಣದ ಅಡಿಕೆ ಭವನದಲ್ಲಿ ಆಗಸ್ಟ್ 27 ರಂದು ಸಂಜೆ 4 ಗಂಟೆಗೆ ನಡೆಯಲಿದೆ ಎಂದು ಅಧ್ಯಕ್ಷರು ಇದೇ ಸಂದರ್ಭದಲ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬ್ಯಾಂಕಿನ ಉಪಾಧ್ಯಕ್ಷ ನರಸಿಂಹ ಬೋಳಪಾಲ್, ನಿರ್ದೇಶಕರಾದ ಡಿ. ಶಂಕರ ಭಟ್ಟ, ಸದಾನಂದ ಭಟ್ಟ, ಎಸ್ ಕೆ ಭಾಗ್ವತ, ಎಸ್ ಎಂ ಭಟ್ಟ, ರಾಜೇಂದ್ರ ಬದ್ದಿ, ಲೋಕೇಶ್ ಗಿಡ್ಡನ್, ವಿಜಯಶ್ರೀ ವೈದ್ಯ, ಪ್ರಿಯಾ ವಿ ಗಾಂವ್ಕರ, ರವಿ ಹುಳ್ಸೆ ಹಾಗೂ ಪ್ರಭಾರಿ ಮುಖ್ಯ ಕಾರ್ಯನಿರ್ವಾಹಕ ರಾಜೇಶ ಪಿ ಬಿಳಗೀಕರ್ ಉಪಸ್ಥಿತರಿದ್ದರು.














Leave a Reply