
ಶಿರಸಿ: ತಾಲೂಕಿನ ಹುಲೇಕಲ್‌ನಲ್ಲಿ ಆಕಳು ಹಾಗೂ ಕರುಗಳನ್ನು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ಜಿಲ್ಲಾ ದನ ಕಳ್ಳರ ಗ್ಯಾಂಗ್‌ನ ಮೂವರು ಆರೋಪಿಗಳನ್ನು ಶಿರಸಿ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗದ ಟಿಪ್ಪುನಗರದ ಮೊಹಮ್ಮದ್ ಅಯಾಜ್ ಅಲಿಯಾಸ್ ಅಂಡು (23), ಶಿವಮೊಗ್ಗದ ಹೊಳ್ಳೂರಿನ ಮೊಹಮ್ಮದ್ ಇಸ್ಮಾಯಿಲ್ (36) ಹಾಗೂ ಶಿವಮೊಗ್ಗದ ಸೂಳೆಬೈಲಿನ ಅಬ್ದುಲ್ ಅಜೀಜ್ (35) ಬಂಧಿತರು.
ಆ.12ರಂದು ರಾತ್ರಿ ಹುಲೇಕಲ್‌ನಲ್ಲಿ ಅಪರಿಚಿತ ಇಬ್ಬರು ವ್ಯಕ್ತಿಗಳು ಕಾಲ್ನಡಿಗೆಯಲ್ಲಿ ಬಂದು ಆಕಳು ಹಾಗೂ ಕರುಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಆರೋಪಿಗಳ ಪತ್ತೆ ಹಾಗೂ ಜಾನುವಾರುಗಳ ರಕ್ಷಣೆಗೆ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಎರಡು ತಂಡಗಳನ್ನು ರಚಿಸಿ ತನಿಖೆ ಕೈಗೊಂಡಿದ್ದರು. ತನಿಖೆಯ ವೇಳೆ ಜಾನುವಾರು ಕಳ್ಳತನದ ಗ್ಯಾಂಗ್ ಪತ್ತೆಯಾಗಿದ್ದು, ಶಿವಮೊಗ್ಗ ಮೂಲದ ಮೂವರನ್ನು ಬಂಧಿಸಲಾಗಿದೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಮಹೀಂದ್ರಾ ಎಕ್ಸ್‌ಯುವಿ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಕೃಷ್ಣಮೂರ್ತಿ, ಡಿವೈಎಸ್‌ಪಿ ಗೀತಾ ಪಾಟೀಲ್ ಮಾರ್ಗದರ್ಶನದಲ್ಲಿ ಶಿರಸಿ ಗ್ರಾಮೀಣ ಠಾಣೆಯ ಪೊಲೀಸ್ ನಿರೀಕ್ಷಕ ರಮೇಶ ಹೂಗಾರ ನೇತೃತ್ವದಲ್ಲಿ
ಪಿಎಸ್‌ಐ ಸಂತೋಷಕುಮಾರ ಎಂ., ತನಿಖಾ ಪಿ.ಎಸ್.ಐ ಅಶೋಕ ರಾಠೋಡ, ಎಎಸ್‌ಐ ಪ್ರದೀಪ ರೇವಣಕರ, ಮಹಾಂತೇಶ್ ಬಾರಕೇರ್, ಬಸವರಾಜ್ ಹಗರಿ, ಕೋಟೇಶ ನಾಗರವಳ್ಳಿ, ಅರುಣಕುಮಾರ.ವಿ, ವೆಂಕಟ್ರಮಣ ನಾಯ್ಕ, ದಾವಲ್ ಸಾಬ್ ಕುಂದಿ, ಮಾರುತಿ ಗೌಡ, ಸಂದೀಪ ನಿಂಬಾಯಿ, ಗಣಪತಿ ನಾಯ್ಕ, ಭರತ್.ಎನ್.ಜೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.













Leave a Reply