ಸಾಂಬಾರ್‌ನಲ್ಲಿ ಬೇಳೆ ಹುಡುಕಲು ಹೋದ ಶಾಸಕ ಭೀಮಣ್ಣ: ಬರಗಾಲವಾದರೂ ಸಾಂಬಾರನಲ್ಲಿ ಬೇಕಾಬಿಟ್ಟಿ   ನೀರು ಕಂಡು ಶಾಕ್!

ಹಂಚಿಕೊಳ್ಳಿ

ಶಿರಸಿ: ಇಲ್ಲಿನ ಪ್ರಸಿದ್ಧ ಮಾರಿಕಾಂಬ ಪ್ರೌಢಶಾಲೆಗೆ ಇತ್ತೀಚೆಗೆ ಮಧ್ಯಾಹ್ನದ ಬಿಸಿಯೂಟದ ಸಮಯದಲ್ಲಿ ಶಾಸಕ ಭೀಮಣ್ಣ ನಾಯ್ಕ್ ಅವರು ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿದ್ದ ಮಧ್ಯಾಹ್ನದ ಆಹಾರದ ಗುಣಮಟ್ಟವನ್ನು ಅವರು ಖುದ್ದಾಗಿ ಪರಿಶೀಲಿಸಿದರು.

ಪರಿಶೀಲನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಸಾಂಬಾರ್ ತೀರಾ ನೀರಿನಂತಿದ್ದು, ಕಳಪೆ ಗುಣಮಟ್ಟದಿಂದ ಕೂಡಿರುವುದು ಶಾಸಕರ ಗಮನಕ್ಕೆ ಬಂದಿತು. ಇದನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಸ್ಥಳದಲ್ಲಿದ್ದ ಬಿಸಿಯೂಟದ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

“ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆಯನ್ನು ಸುಧಾರಿಸಲು ಸರ್ಕಾರ ಕೋಟ್ಯಂತರ ರೂಪಾಯಿ ಹಣವನ್ನು ಖರ್ಚು ಮಾಡುತ್ತಿದೆ. ಆದರೆ, ನೀವು ಜವಾಬ್ದಾರಿಯಿಲ್ಲದೆ ನೀರಿನಂತಿರುವ ಸಾಂಬಾರ್ ನೀಡುವ ಮೂಲಕ ಮಕ್ಕಳ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದೀರಿ” ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ ಶಾಸಕರು, “ಮುಂದಿನ ದಿನಗಳಲ್ಲಿ ಇಂತಹ ನಿರ್ಲಕ್ಷ್ಯ ಅಥವಾ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಕಂಡುಬಂದರೆ, ತಕ್ಷಣವೇ ಗುತ್ತಿಗೆಯನ್ನು ರದ್ದುಗೊಳಿಸಿ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

Leave a Reply

Your email address will not be published. Required fields are marked *