ಮದ್ಯದ ಕೂಟಕ್ಕೆ ಪೊಲೀಸರಿಂದ ಬ್ರೇಕ್!

ಹಂಚಿಕೊಳ್ಳಿ

ಶಿರಸಿ: ತಾಲೂಕಿನ ಉಂಚಳ್ಳಿ ಕೊಪ್ಪದ ಬಸ್‌ ನಿಲ್ದಾಣದ ಸಮೀಪ ಸಾರ್ವಜನಿಕರಿಗೆ ಮದ್ಯ ಸೇವಿಸಲು ಸ್ಥಳಾವಕಾಶ ಮಾಡಿಕೊಡುತ್ತಿದ್ದ ಆರೋಪದ ಮೇಲೆ ಕೊಪ್ಪದ ಮಂಜುನಾಥ ಕೊರ್ಗಾ ದೇವಾಡಿಗ (53) ವಿರುದ್ಧ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ.6ರಂದು ರಾತ್ರಿ 8.10ರ ಸುಮಾರಿಗೆ ಸಾರ್ವಜನಿಕರಿಗೆ ಮದ್ಯ ಸೇವಿಸಲು ಅನುಕೂಲ ಮಾಡಿಕೊಡುತ್ತಿದ್ದ ವೇಳೆ ಪಿಎಸ್‌ಐ ಮಹಾಂತಪ್ಪ ಕುಂಬಾರ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ 165 ರೂ. ಮೌಲ್ಯದ ವಿವಿಧ ಮದ್ಯದ ಪಾಕೆಟ್‌ಗಳು ಹಾಗೂ 250 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರಸಿ: ತಾಲೂಕಿನ ಗಡಗೇರಿ ಗ್ರಾಮದ ರಸ್ತೆಬದಿಯ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದ ಆರೋಪದ ಮೇಲೆ ಡುಮಿಂಗ್ ಅಂತೋನಿ ಡಿಸೋಜಾ (56) ವಿರುದ್ಧ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕರಿಗೆ ಮದ್ಯ ಸೇವಿಸಲು ಅನುಕೂಲ ಮಾಡಿಕೊಡುತ್ತಿದ್ದ ಮಾಹಿತಿ ಮೇರೆಗೆ ಪಿಎಸ್‌ಐ ಮಹಾಂತಪ್ಪ ಕುಂಬಾರ ನೇತೃತ್ವದ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ ವಿವಿಧ ಕಂಪನಿಯ 110 ಮದ್ಯದ ಪಾಕೆಟ್‌ಗಳು ಹಾಗೂ 200‌ ರೂ. ನಗದನ್ನು ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *