ಭಟ್ಕಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್: ಸುಳ್ಳು ಸುದ್ದಿ ಹರಡದಂತೆ ಹಾಗೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರಲ್ಲಿ ಮನವಿ

ಹಂಚಿಕೊಳ್ಳಿ

ಭಟ್ಕಳ:
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಅತ್ಯಂತ ಕಟ್ಟುನಿಟ್ಟಿನ ಹಾಗೂ ಮುಂಜಾಗ್ರತಾ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ. ನಗರದಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ನಾಗರಿಕರ ಸುರಕ್ಷತೆಯನ್ನು ಖಾತ್ರಿಪಡಿಸಲು ಸಾರ್ವಜನಿಕ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಪ್ರಸ್ತುತ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಮತ್ತು ಸಾರ್ವಜನಿಕರಲ್ಲಿ ಧೈರ್ಯ ತುಂಬಲು ಜಿಲ್ಲಾ ಪೊಲೀಸ್ ಪ್ರಮುಖ ಸ್ಥಳಗಳಲ್ಲಿ ಹೆಚ್ವುವರಿ ಅಧಿಕಾರಿಗಳನ್ನು ನಿಯೋಜಿಸಿದೆ. ಇದರ ಭಾಗವಾಗಿ ಡಿ.ಎ.ಆರ್ ಮತ್ತು ಕೆ.ಎಸ್.ಆರ್.ಪಿ ಸ್ಟ್ರೈಕಿಂಗ್ ಫೋರ್ಸ್‌ನ 05 ತುಕಡಿಗಳು, ಎಸ್.ಎ.ಎಫ್‌ನ 21 ಸಿಬ್ಬಂದಿಗಳು ಹಾಗೂ ಆರ್.ಎ.ಎಫ್‌ನ 136 ಸಿಬ್ಬಂದಿಗಳನ್ನು ಭಟ್ಕಳದಾದ್ಯಂತ ಕಾವಲಿಗಾಗಿ ನಿಯೋಜಿಸಲಾಗಿದೆ.

ಸಾರ್ವಜನಿಕರಲ್ಲಿ ಕಳಕಳಿಯ ಮನವಿ:
ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡದೆ, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಅನಗತ್ಯ ಸಂಘರ್ಷಕ್ಕೆ ಕಾರಣವಾಗದಂತೆ ಸಾರ್ವಜನಿಕರು ಅತ್ಯಂತ ಸಂಯಮದಿಂದ ವರ್ತಿಸಬೇಕಿದೆ.

ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಲು ದಿನದ 24 ಗಂಟೆಯೂ ಶ್ರಮಿಸುತ್ತಿರುವ ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಸಂಪೂರ್ಣವಾಗಿ ಸಹಕರಿಸಬೇಕು. ಪರಿಸರದಲ್ಲಿ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ನಗರದಲ್ಲಿ ಶಾಂತಿ ನೆಲೆಸಲು ಕೈಜೋಡಿಸಬೇಕಾಗಿ ವಿನಂತಿಸಲಾಗಿದೆ.

Leave a Reply

Your email address will not be published. Required fields are marked *