ವಜ್ರಳ್ಳಿ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದ ರಿಥಮಿಕ್ ಯೋಗ ಸ್ಪರ್ಧೆಗೆ ಆಯ್ಕೆ!!!!

ಹಂಚಿಕೊಳ್ಳಿ

ಯಲ್ಲಾಪುರ: ತಾಲೂಕಿನ ವಜ್ರಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಪ್ರಾಥಮಿಕ ಶಾಲಾ ಲೀಗ್ ಪಂದ್ಯಾಟದ ರಿಥಮಿಕ್ ಯೋಗ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿಯರಾದ ಅಸ್ನಾ ಹುಸೇನ ಮುಲ್ಲಾ ಹಾಗೂ ಶ್ರೀಲಕ್ಷ್ಮಿ ಪ್ರಸನ್ನ ಭಟ್ ಈ ಸಾಧನೆ ಮಾಡಿದ ಬಾಲಕಿಯರು. ತಾಲೂಕು ಮಟ್ಟದ ಕಠಿಣ ಸ್ಪರ್ಧೆಯಲ್ಲಿ ತಮ್ಮ ಅತ್ಯದ್ಭುತ ಯೋಗ ಕೌಶಲ್ಯ ಹಾಗೂ ಲಯಬದ್ಧ ಪ್ರದರ್ಶನದ ಮೂಲಕ ತೀರ್ಪುಗಾರರ ಮತ್ತು ಪ್ರೇಕ್ಷಕರ ಮನ ಗೆದ್ದು ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಗ್ರಾಮೀಣ ಭಾಗದ ಶಾಲೆಯೊಂದರ ವಿದ್ಯಾರ್ಥಿನಿಯರು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದು ವಜ್ರಳ್ಳಿ ಗ್ರಾಮಕ್ಕೆ ಹಾಗೂ ಶಾಲೆಗೆ ಹೆಮ್ಮೆ ತಂದಿದೆ. ವಿದ್ಯಾರ್ಥಿನಿಯರ ಈ ಮಹೋನ್ನತ ಸಾಧನೆಗೆ ಯಲ್ಲಾಪುರ ಮೊಹರಂ ಸಮಿತಿಯ ಕಾರ್ಯದರ್ಶಿ ಜಾಕಿರ್ ಮುಲ್ಲಾ  ಅಭಿನಂದನೆ ಸಲ್ಲಿಸಿದ್ದಾರೆ. ವಜ್ರಳ್ಳಿ   ಶಾಲೆಯ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾರ್ದಿಕ ಅಭಿನಂದನೆ ಸಲ್ಲಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲೂ ವಿಜೇತರಾಗಲಿ ಎಂದು ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *