ಕಸ್ತೂರಿರಂಗನ್ ವರದಿ ಅನುಷ್ಠಾನ ವಿರೋಧಿಸಿ ಸದನದಲ್ಲಿ ಮಾತನಾಡಿದ ಶಾಸಕ ಹೆಬ್ಬಾರ್ : ಶಾಸಕರು ಏನಂದ್ರು ನೋಡಿ ವಿಡಿಯೋ ಸಹಿತ ಈ ವರದಿಯಲ್ಲಿ

ಹಂಚಿಕೊಳ್ಳಿ

ಬೆಂಗಳೂರು: ಕಸ್ತೂರಿರಂಗನ್ ವರದಿಯನ್ನು ಅನುಷ್ಠಾನಕ್ಕೆ ತರುವುದನ್ನು ಶಾಸಕ ಶಿವರಾಮ ಹೆಬ್ಬಾರ್ ಅವರು ಕಡ್ಡಾಯವಾಗಿ ವಿರೋಧಿಸಿದ್ದು, ಇದರಿಂದ ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿ ಕುರಿತು ಹಾಗೂ ಸ್ಥಳೀಯ ಜನವಸತಿ ಪ್ರದೇಶಗಳಿಗೆ ಎದುರಾಗಲಿರುವ ಗಂಭೀರ ಸವಾಲುಗಳ ಬಗ್ಗೆ ವಿಧಾನಸಭೆಯ ವಿಶೇಷ ಕಲಾಪದಲ್ಲಿ ಧ್ವನಿ ಎತ್ತಿದ್ದಾರೆ.

ವಿಶೇಷ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ ಅವರು, “ಕಸ್ತೂರಿರಂಗನ್ ವರದಿಯು ಜಾರಿಯಾದರೆ ಉತ್ತರ ಕನ್ನಡ ಜಿಲ್ಲೆಯ ಪ್ರಗತಿ ಕುಂಠಿತಗೊಳ್ಳಲಿದೆ. ಹಳ್ಳಿಗಳ ಮತ್ತು ಜನಸಾಮಾನ್ಯರ ಹಿತದೃಷ್ಟಿಯಿಂದ ಈ ವರದಿಯನ್ನು ನಾವು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ” ಎಂದು ಕಡಾಖಂಡಿತವಾಗಿ ಸ್ಪಷ್ಟಪಡಿಸಿದರು.

ಇದೇ ವೇಳೆ ಗ್ರಾಮೀಣ ಪ್ರದೇಶದ ಮತ್ತೊಂದು ಪ್ರಮುಖ ಸಮಸ್ಯೆಯತ್ತ ಸರ್ಕಾರದ ಗಮನ ಸೆಳೆದ ಶಾಸಕರು, ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯು ಇತ್ತೀಚೆಗೆ ಹೊರಡಿಸಿರುವ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಿ ಜಾಗದಲ್ಲಿರುವ ನಿವೇಶನಗಳನ್ನು ತೆರಿಗೆ ವ್ಯಾಪ್ತಿಯಿಂದ ಹೊರಗಿಡುವ ಇಲಾಖೆಯ ನಿರ್ಧಾರವು ಹಳ್ಳಿಗಳ ಬಡ ಜನರಿಗೆ ಅನ್ಯಾಯ ಉಂಟುಮಾಡುತ್ತದೆ. ಆದ್ದರಿಂದ, ಗ್ರಾಮೀಣ ಭಾಗದ ನಾಗರಿಕರ ಹಿತವನ್ನು ಕಾಪಾಡಲು ಸರ್ಕಾರ ತಕ್ಷಣವೇ ಈ ಜನವಿರೋಧಿ ಆದೇಶವನ್ನು ಹಿಂಪಡೆಯಬೇಕು ಎಂದು ಅವರು ಸದನದಲ್ಲಿ ಒತ್ತಾಯಿಸಿದರು.

Leave a Reply

Your email address will not be published. Required fields are marked *