ಬೆಳ್ಳಂಬೆಳಿಗ್ಗೆ ಶಿರಸಿಯಲ್ಲಿ ಪೊಲೀಸರಿಂದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ!!!

ಹಂಚಿಕೊಳ್ಳಿ

ಶಿರಸಿ: ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಸೋಮವಾರ ಬೆಳ್ಳಂ ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬಂಧಿಸಲಾಗಿದೆ.
ಸೋಮವಾರ ಬೆಳಗ್ಗೆ 1೦ಗಂಟೆಗೆ ಶಿರಸಿಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಲು ಹಾಗೂ ತದ ನಂತರ 11.30ಕ್ಕೆ ದಾಸನಕೊಪ್ಪದಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಸಲು ರೈತ ಸಂಘ ಉದ್ದೇಶಿಸಿತ್ತು. ಅದಕ್ಕಾಗಿ ಕೋಡಿಹಳ್ಳಿ ಚಂದ್ರಶೇಖರ್ ಶಿರಸಿಗೆ ಆಗಮಿಸಿದ್ದರು.


2013ರಲ್ಲಿ ನಡೆದ ಮಹದಾಯಿ ಹೋರಾಟಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಾರೆಂಟ್ ಆಧರಿಸಿ ಪೊಲೀಸರು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಶಿರಸಿಯಲ್ಲಿ ಅವರನ್ನು ಬಂಧಿಸಿದ ಹುಬ್ಬಳ್ಳಿ ರೈಲ್ವೇ ಪೊಲೀಸರು, ಬಳಿಕ ಹೆಚ್ಚಿನ ವಿಚಾರಣೆ ಹಾಗೂ ಕಾನೂನು ಪ್ರಕ್ರಿಯೆಗಾಗಿ ಹುಬ್ಬಳ್ಳಿಗೆ ಕರೆದೊಯ್ದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ನಡೆದ ಹೋರಾಟದ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ.
ಇನ್ನು ರೈತ ಹೋರಾಟಗಾರ ಕೋಡಿಹಳ್ಳಿ ಬಂಧನ ಕಿಡಿ ಹೊತ್ತಿಸಿದ್ದರೂ ನ್ಯಾಯಾಲಯದ ವಾರಂಟ್ ಮೇಲೆ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಂಧನದ ಬಳಿಕ ಕೋಡಿಹಳ್ಳಿ ಅವರನ್ನು ಹುಬ್ಬಳ್ಳಿಗೆ ಕರೆದೊಯ್ಯಲಾಗಿದ್ದು, ಹೆಚ್ಚಿನ ವಿವರ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *