ಮುಂಡಗೋಡ: ತಾಲೂಕಿನ ನಾಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಬಿಜೆಪಿಯ ಹಲವು ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಎಂ. ನಾಯ್ಕ ಅವರ ಸಮ್ಮುಖದಲ್ಲಿ ಚಿನ್ನಪ್ಪ ತಿರಕನವರ, ತಿಮ್ಮಣ್ಣ ಜಾಲನವರ, ಶಂಕರ ಬದನಗಾಡ, ಲಕ್ಷ್ಮಣ ಜಾಧವ, ಗಂಗಾಧರ ಅರೇರ, ಪ್ರಕಾಶ ಬದನಗಾಡ, ರವಿ ತಿರಕನವರ, ರಮೇಶ್ ಪಕೀರಪ್ಪ ಹಾಗೂ ಶಂಬಣ್ಣ ವಡ್ಡರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ನೂತನವಾಗಿ ಕಾಂಗ್ರೆಸ್ ಸೇರ್ಪಡೆಗೊಂಡ ಕಾರ್ಯಕರ್ತರಿಗೆ ಪಕ್ಷದ ಮುಖಂಡರು ಶಾಲು ಹೊದಿಸಿ ಆತ್ಮೀಯವಾಗಿ ಸ್ವಾಗತಿಸಿದರು. ಸ್ಥಳೀಯ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ಕುರಿತು ಮುಖಂಡರು ಹಾಗೂ ಕಾರ್ಯಕರ್ತರು ಚರ್ಚಿಸಿದರು.
ಕಾರ್ಯಕ್ರಮದಲ್ಲಿ ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎಂ. ನಾಯ್ಕ, ಕಾಂಗ್ರೆಸ್ ಪ್ರಚಾರ ಸಮಿತಿ ತಾಲೂಕು ಅಧ್ಯಕ್ಷ ಕೆಂಜೋಡಿ ಗಲಬಿ, ಸಿದ್ದಣ್ಣ ಹಡಪದ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ವೈ.ಪಿ. ಭುಜಂಗಿ, ಮಾರ್ಕೆಟಿಂಗ್ ಸೊಸೈಟಿ ನಿರ್ದೇಶಕ ಪರಶುರಾಮ ತಹಶೀಲ್ದಾರ್, ಮಹಮ್ಮದ್ ಗಾನಮಾನದಾರ, ಬಸವರಾಜ ಆಸಕ್ತೆಟ್ಟಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.















Leave a Reply