ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವಿಮನೆ ಘಟ್ಟದ ಸಮೀಪದ ಮಾಸ್ತಿ ಹಳ್ಳ ಬಳಿ ಕೆಎಸ್ಆರ್ಟಿಸಿ ಬಸ್ವೊಂದು ಕಂದಕಕ್ಕೆ ಉರುಳಿದ ಘಟನೆ ಗುರುವಾರ ಸಂಜೆ ನಡೆದಿದೆ. ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವುದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಶಿರಸಿ ಕಡೆಯಿಂದ ಧರ್ಮಸ್ಥಳದತ್ತ ಬಸ್ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲು ನೆರವಾದರು ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಗಾಯಾಳುಗಳ ನಿಖರ ಸಂಖ್ಯೆ ಹಾಗೂ ಅವರ ಸ್ಥಿತಿಗತಿ ಕುರಿತು ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.















Leave a Reply