ಯಲ್ಲಾಪುರ:
2027-28ನೇ ಶೈಕ್ಷಣಿಕ ಸಾಲಿನಲ್ಲಿ ಜವಾಹರ ನವೋದಯ ವಿದ್ಯಾಲಯಗಳ 9ನೇ ಹಾಗೂ 11ನೇ ತರಗತಿಗಳ ಖಾಲಿ ಇರುವ ಸ್ಥಾನಗಳಿಗೆ ಲ್ಯಾಟರಲ್ ಎಂಟ್ರಿ ಪ್ರವೇಶ ಪರೀಕ್ಷೆ ಮೂಲಕ ವಿದ್ಯಾರ್ಥಿಗಳ ಆಯ್ಕೆ ನಡೆಯಲಿದೆ.
ಈ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅಕ್ಟೋಬರ್ 15, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಹ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಅರ್ಜಿ ಸಲ್ಲಿಸುವಂತೆ ನವೋದಯ ವಿದ್ಯಾಲಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
9ನೇ ತರಗತಿ ಪ್ರವೇಶ ಪರೀಕ್ಷೆ (LEST 2026):
https://cbseitms.nic.in/2026/nvsix_9
11ನೇ ತರಗತಿ ಪ್ರವೇಶ ಪರೀಕ್ಷೆ (LEST 2026):
https://cbseitms.nic.in/2026/nvsxi_11
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಪ್ರವೇಶಕ್ಕೆ ಸಂಬಂಧಿಸಿದ ಅರ್ಹತೆ, ನಿಯಮಗಳು ಹಾಗೂ ಅಗತ್ಯ ದಾಖಲೆಗಳ ವಿವರಗಳನ್ನು ಅಧಿಕೃತ ಮಾಹಿತಿಯಲ್ಲಿ ಪರಿಶೀಲಿಸಿಕೊಳ್ಳುವಂತೆ ಸೂಚಿಸಲಾಗಿದೆ.















Leave a Reply