ಸಿದ್ದಾಪುರ: ತಾಲೂಕಿನ ಬೇಡ್ಕಣಿ ಬಳಿ ಸಿದ್ದಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಸೇರುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಬೇಕೆಂಬ ಬೇಡಿಕೆ ಕೇಳಿಬಂದಿದೆ.
ಬಸ್ನ ಸ್ಥಿತಿಯೂ ಹಳೆಯದಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಿಕ್ಕಿರಿದು ಪ್ರಯಾಣಿಸುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಜೆಡಿಎಸ್ ಪ್ರಮುಖ ಉಪೇಂದ್ರ ಪೈ ಅವರು, ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಅನುಕೂಲದ ದೃಷ್ಟಿಯಿಂದ ಈ ಮಾರ್ಗದಲ್ಲಿ ಮತ್ತೊಂದು ಸರ್ಕಾರಿ ಬಸ್ ಬಿಡುವಂತೆ ಆಗ್ರಹಿಸಿದ್ದಾರೆ.
ಕಾಲೇಜಿಗೆ ಪ್ರತಿನಿತ್ಯ ಸಂಚರಿಸುವ ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ಅಗತ್ಯವಾಗಿದ್ದು, ಸಂಬಂಧಪಟ್ಟ ಸಾರಿಗೆ ಅಧಿಕಾರಿಗಳು ಸಮಸ್ಯೆಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬು ಜೆ ಡಿ ಎಸ್ ಮುಖಂಡ ಉಪೇಂದ್ರ ಪೈ ಆಗ್ರಹಿಸಿದ್ದಾರೆ.















Leave a Reply