ಬುದ್ಧಿಬಲದ ಆಟದಲ್ಲಿ ಯಲ್ಲಾಪುರದ ಹುಡುಗಿ ಮೇಲುಗೈ: ರಾಜ್ಯಮಟ್ಟದ ಚೆಸ್ ಸ್ಪರ್ಧೆಗೆ ನಂದೊಳ್ಳಿಯ ನಿಯತಿ ಆಯ್ಕೆ

ಹಂಚಿಕೊಳ್ಳಿ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಎಂ. ನಿಯತಿ ಅವರು ರಾಜ್ಯಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಶಿರಸಿಯಲ್ಲಿ ನಡೆದ 17 ವರ್ಷ ವಯೋಮಾನದ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಚೆಸ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿ ವಿಜೇತರಾದ ನಿಯತಿ, ಇದೀಗ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯನ್ನು ಪ್ರತಿನಿಧಿಸುವ ಅವಕಾಶ ಪಡೆದಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಿ.ಪಿ. ಭಟ್ಟ ಅವರು ಮಾರ್ಗದರ್ಶನ ನೀಡಿದ್ದರು.

ನಿಯತಿ ಅವರ ಸಾಧನೆಗೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿ, ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *