
ಯಲ್ಲಾಪುರ: ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರ ಗೆಲುವಿಗಾಗಿ ಸಚಿವ ಲಕ್ಷ್ಮಣ ಸವದಿ ಹಾಗೂ ಶಾಸಕ ಶಿವರಾಮ ಹೆಬ್ಬಾರ್ ಅವರು ಯಲ್ಲಾಪುರದಲ್ಲಿ ಮತಯಾಚನೆ ನಡೆಸಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಾಲಯದಲ್ಲಿ ಅಕ್ಟೋಬರ್ 18ರಂದು ಆಯೋಜಿಸಲಾಗಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಸಚಿವ ಲಕ್ಷ್ಮಣ ಸವದಿ ಹಾಗೂ ಶಾಸಕ ಶಿವರಾಮ ಹೆಬ್ಬಾರ್ ಅವರು, ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರನ್ನು ಬೆಂಬಲಿಸುವಂತೆ ಪದವೀಧರ ಮತದಾರರಲ್ಲಿ ಮನವಿ ಮಾಡಿದರು. ಅಭ್ಯರ್ಥಿಯ ಗೆಲುವಿಗಾಗಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ. ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್. ಭಟ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ರಾಠೋಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜಯ ಮಿರಾಶಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎನ್.ಕೆ. ಭಟ್, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿಯ ಉಪಾಧ್ಯಕ್ಷ ಪ್ರೇಮಾನಂದ ನಾಯ್ಕ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ ,ಯುವ ಮುಖಂಡ ಅನಿಕೇತ ಮಿರಾಶಿ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಹಂತಗಳ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.















Leave a Reply