ಉಮ್ಮಚಗಿ ಸಮೀಪ ಬೈಕ್ ಸ್ಕಿಡ್: ಬಿಸಗೋಡ ಗ್ರಾಮದ ವಿವೇಕ ಇನ್ನಿಲ್ಲ!

ಹಂಚಿಕೊಳ್ಳಿ

ಯಲ್ಲಾಪುರ: ರಾತ್ರಿ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಯಲ್ಲಾಪುರ ತಾಲೂಕಿನ ಉಮ್ಮಚಗಿ ಸಮೀಪದ ಚವತ್ತಿ ಬಳಿ ಸಂಭವಿಸಿದೆ.

ತಾಲೂಕಿನ  ಬಿಸಗೋಡ ಗ್ರಾಮದ ವಿವೇಕ ದತ್ತಾತ್ರೇಯ ಭಟ್ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಪೊಲೀಸ್ ವರದಿಯ ಪ್ರಕಾರ, ವಿವೇಕ ಭಟ್ ಅವರು ಅ.17ರ ರಾತ್ರಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಚವತ್ತಿ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾರೆ ಎನ್ನಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮಾಹಿತಿ ಪಡೆದ ಯಲ್ಲಾಪುರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಕಾನೂನು ಕ್ರಮ ಕೈಗೊಂಡಿದ್ದಾರೆ.

ಘಟನೆಯ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *