
ಯಲ್ಲಾಪುರ,: ಪಶ್ಚಿಮ ಪದವೀಧರರ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರ ಪರವಾಗಿ ಶಾಸಕ ಶಿವರಾಮ ಹೆಬ್ಬಾರ್ ಅವರು ಯಲ್ಲಾಪುರ ಪಟ್ಟಣದಲ್ಲಿ ಭಾನುವಾರ ವಿವಿಧ ಸಂಘ-ಸಂಸ್ಥೆಗಳಿಗೆ ಭೇಟಿ ನೀಡಿ ಮತಯಾಚಿಸಿದರು.




ಪಟ್ಟಣದ ವಿವಿಧ ಸಂಘ-ಸಂಸ್ಥೆಗಳ ಪದವೀಧರ ಮತದಾರರನ್ನು ಭೇಟಿಯಾದ ಶಾಸಕರು, ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಚುನಾವಣೆಯಲ್ಲಿ ಅಭ್ಯರ್ಥಿಯ ಗೆಲುವಿಗೆ ಪದವೀಧರ ಮತದಾರರು ಸಹಕರಿಸಬೇಕು ಎಂದು ಕೋರಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡರು.















Leave a Reply