ಸ್ವಾಮಿಯೇ ಶರಣಂ ಅಯ್ಯಪ್ಪ: ಕೊಚ್ಚಿಯಲ್ಲಿ ಮಾಲೆ ಧರಿಸಿ, ಶಬರಿಮಲೆಯತ್ತ ಹೊರಟ ಕೇಂದ್ರ ಸಚಿವ HDK

ಹಂಚಿಕೊಳ್ಳಿ

ಕೇರಳ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಕಲಿಯುಗ ವರದಪ್ರದಾತ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ (Sabarimala Ayyappa Swamy) ಸನ್ನಿಧಿಗೆ ಭೇಟಿ ನೀಡಿ ದರ್ಶನ ಪಡೆಯುವ ಹಿನ್ನೆಲೆಯಲ್ಲಿ ಇಂದು ಶ್ರದ್ಧಾಭಕ್ತಿಯಿಂದ ಅಯ್ಯಪ್ಪ ಮಾಲೆಯನ್ನು ಧರಿಸಿಕೊಂಡಿದ್ದಾರೆ.

ಕೇರಳ ಪ್ರವಾಸದಲ್ಲಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ ಕೊಚ್ಚಿಯಲ್ಲಿರುವ ಪ್ರಸಿದ್ಧ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ (Kochi Subramanya Temple) ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಾಲಾಧಾರಣೆ ಮಾಡಿದರು. ಇಂದು ಸಂಜೆಯ ವೇಳೆಗೆ ಶಬರಿಮಲೆ ತಲುಪಲಿರುವ ಹೆಚ್‌ಡಿಕೆ, ಇರುಮುಡಿ ಕಟ್ಟು ಹೊತ್ತು ಶಬರಿಮಲೆಯಲ್ಲಿ ಅಯ್ಯಪ್ಪಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಮತ್ತು ಆಶೀರ್ವಾದ ಪಡೆಯಲಿದ್ದಾರೆ.

ಈ ಸಂದರ್ಭದಲ್ಲಿ ಜೆಡಿಎಲ್‌ಪಿ ನಾಯಕ ಸುರೇಶ್ ಬಾಬು, ವಿಧಾನ ಪರಿಷತ್ ಸದಸ್ಯ (MLC) ಎಸ್.ಎಲ್. ಭೋಜೇಗೌಡ ಸೇರಿದಂತೆ ಜೆಡಿಎಸ್‌ನ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದು, ಹೆಚ್‌ಡಿಕೆ ಅವರೊಂದಿಗೆ ಅಯ್ಯಪ್ಪ ಸ್ವಾಮಿ ದೀಕ್ಷೆ ಮತ್ತು ದರ್ಶನ ಪ್ರವಾಸದಲ್ಲಿ ಭಾಗಿಯಾಗಿದ್ದಾರೆ.

Leave a Reply

Your email address will not be published. Required fields are marked *

Advertisement


This will close in 3 seconds