ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಉಂಟಾದ ಅತಿವೃಷ್ಠಿ ಹಾಗೂ ಅನಾವೃಷ್ಠಿ ಪೀಡಿತ ಪ್ರದೇಶಗಳ ವೀಕ್ಷಣೆ ಮತ್ತು ಹಾನಿ ಕುರಿತು ಪರಿಶೀಲನಾ ಸಭೆ ನಡೆಸಲು ನೂತನ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ಗುರುವಾರ (ಆಗಸ್ಟ್ 06) ಜಿಲ್ಲೆಗೆ ಆಗಮಿಸಿದರು.
ಜಿಲ್ಲೆಗೆ ಪ್ರಥಮ ಬಾರಿಗೆ ಆಗಮಿಸಿದ ಉಸ್ತುವಾರಿ ಸಚಿವರಿಗೆ ಕಾರವಾರದಲ್ಲಿ ಆತ್ಮೀಯ ಸ್ವಾಗತ ದೊರೆಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಯಲ್ಲಾಪುರ ಕ್ಷೇತ್ರದ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಸಚಿವ ಲಕ್ಷ್ಮಣ ಸವದಿ ಅವರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಕ್ಷೇತ್ರದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸನ್ಮಾನಿಸಿ ಬರಮಾಡಿಕೊಂಡರು.
ಜಿಲ್ಲೆಯ ಪ್ರಸ್ತುತ ಪರಿಸ್ಥಿತಿ, ಮಳೆಯಿಂದ ಆಗಿರುವ ಹಾನಿ ಮತ್ತು ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳ ಕುರಿತು ಕೆಲಕಾಲ ಚರ್ಚಿಸಿದರು. ಸಚಿವರು ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಈ ಸಂದರ್ಭದಲ್ಲಿ ಶಿರಸಿ – ಸಿದ್ಧಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ, ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.












Leave a Reply