ಸೇವಾ ಜ್ಯೋತಿ ನಿಮಿತ್ತ ಯಲ್ಲಾಪುರದಲ್ಲಿ ಬಿಜೆಪಿ ‘ವಿಕಸಿತ ಭಾರತ ಸಂಕಲ್ಪ ಸಭೆ

ಹಂಚಿಕೊಳ್ಳಿ

ಮಹಿಳಾ ಮೋರ್ಚಾ ನೇತೃತ್ವದಲ್ಲಿ ಕಮಲದೀಪ ಕಾರ್ಯಕ್ರಮ; ಹಿರಿಯ ನಾಯಕಿ ನಮಿತಾ ಬೀಡೀಕರ‌ಗೆ ಗೌರವ

ಯಲ್ಲಾಪುರ: ಭಾರತೀಯ ಜನತಾ ಪಕ್ಷದ ವತಿಯಿಂದ ‘ಸೇವಾ ಜ್ಯೋತಿ’ ನಿಮಿತ್ತ ವಿಕಸಿತ ಭಾರತ ಸಂಕಲ್ಪ ಸಭೆ ಯಲ್ಲಾಪುರದಲ್ಲಿ ನಡೆಯಿತು. ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಕಮಲದೀಪ ಕಾರ್ಯಕ್ರಮ ಕೂಡ ಅರ್ಥಪೂರ್ಣವಾಗಿ ನೆರವೇರಿತು.

ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ನಾಯಕಿ ಹಾಗೂ ಸಂಘಟಕರಾದ ನಮಿತಾ ಬೀಡೀಕರ ಅವರನ್ನು ಪಕ್ಷದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ದೇಶದ ಅಭಿವೃದ್ಧಿಗಾಗಿ ಕೈಗೊಂಡಿರುವ ವಿವಿಧ ಯೋಜನೆಗಳ ಕುರಿತು ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ, ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ ಭಟ್ಟ ಹಾಗೂ ಹಿರಿಯ ನಾಯಕಿ ಶ್ಯಾಮಿಲಿ ಪಾಟಣಕರ ಮಾತನಾಡಿದರು.

ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರುತಿ ಹೆಗಡೆ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಮಂಡಳ ಪ್ರಧಾನ ಕಾರ್ಯದರ್ಶಿ ನಟರಾಜ ಗೌಡ, ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಭಟ್ಟ, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸೋಮೇಶ್ವರ ನಾಯ್ಕ, ಯುವಮೋರ್ಚಾ ಅಧ್ಯಕ್ಷ ರಜತ ಬದ್ದಿ, ಪಕ್ಷದ ಪದಾಧಿಕಾರಿಗಳಾದ ರಾಮಣ್ಣ ಚಿಕ್ಯಾನಮನೆ, ಪ್ರದೀಪ ಯಲ್ಲಾಪುರಕರ, ರವಿ ದೇವಡಿಗ, ಜಿ.ಆರ್. ಭಾಗ್ವತ, ಸುಬ್ಬಣ್ಣ ಬೋಳ್ಮನೆ, ಗಜಾನನ ನಾಯ್ಕ, ಮಹಾಬಲೇಶ್ವರ ಭಟ್ಟ, ವೀನೀಷ ಭಟ್ಟ, ಗಣೇಶ ಹೆಗಡೆ, ಸದಾನಂದ ಮರಾಠಿ, ತುಲಸಿದಾಸ ನಾಯ್ಕ ಸೇರಿದಂತೆ ಪಕ್ಷದ ವಿವಿಧ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *