ಬೆಂಗಳೂರು: ಬಿಡದಿ ಸ್ಮಾರ್ಟ್ ಸಿಟಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಯಾಗಿದ್ದು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (H D Kumaraswamy) ಅವರ ಬಹಿರಂಗ ಚರ್ಚೆಯ ಪಂಥಾಹ್ವಾನವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (CM D.K. Shivakumar) ಅಧಿಕೃತವಾಗಿ ಸ್ವೀಕರಿಸಿದ್ದಾರೆ. ಈ ಕುರಿತು ಎಚ್‌ಡಿಕೆಗೆ ಪತ್ರ ಬರೆದಿರುವ ಡಿಕೆಶಿ, ಚರ್ಚೆಗೆ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸುವ ಮೂಲಕ ನೇರಾನೇರ ಮುಖಾಮುಖಿಗೆ ಸಿದ್ಧ ಎಂದಿದ್ದಾರೆ.
ಜೂನ್ 26ರ ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಭಾಂಗಣದಲ್ಲಿ ಬಿಡದಿ ಟೌನ್‌ಶಿಪ್ ಯೋಜನೆಯ ಸಾಧಕ-ಬಾಧಕಗಳ ಕುರಿತು ಬಹಿರಂಗ ಚರ್ಚೆ ನಡೆಸಲು ಸಮಯ ನಿಗದಿ ಮಾಡಲಾಗಿದೆ. “ನೀವು ಹಾಕಿರುವ ಸವಾಲಿಗೆ ನಾನು ಸಿದ್ಧನಾಗಿದ್ದೇನೆ” ಎಂದು ಹೇಳುವ ಮೂಲಕ ಡಿಕೆಶಿ ಅವರು ಕುಮಾರಸ್ವಾಮಿ ಅವರಿಗೆ ಪತ್ರದ ಮುಖೇನ ತಿರುಗೇಟು ನೀಡಿದ್ದಾರೆ. ಈ ಮುಖಾಮುಖಿಯು ಉಭಯ ನಾಯಕರ ನಡುವಿನ ರಾಜಕೀಯ ಜಿದ್ದಾಜಿದ್ದನ್ನು ಮತ್ತಷ್ಟು ರೋಚಕಗೊಳಿಸಿದೆ.

Leave a Reply