ಖ್ಯಾತ ಚಿತ್ರ ನಿರ್ಮಾಪಕ ಬಾ.ಮ ಹರೀಶ್ ಪುತ್ರ ಹೃದಯಾಘಾತದಿಂದ ಸಾ*ವು

ಶಿವಮೊಗ್ಗ: ಕನ್ನಡ ಚಿತ್ರರಂಗದ ಖ್ಯಾತ ಚಲನಚಿತ್ರ ನಿರ್ಮಾಪಕ ಹಾಗೂ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಬಾ.ಮ. ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ (Ullas Gowda) ಕೊಡಚಾದ್ರಿ ಬೆಟ್ಟದಲ್ಲಿ ಟ್ರಕ್ಕಿಂಗ್ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಕೊಡಚಾದ್ರಿಗೆ ಸ್ನೇಹಿತರೊಂದಿಗೆ ಟ್ರಕ್ಕಿಂಗ್‌ಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ.

ಉಲ್ಲಾಸ್ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಹೃದಯಾಘಾತ (Heart Attack) ಸಂಭವಿಸಿದ್ದೇ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ. ಕುಸಿದು ಬಿದ್ದ ತಕ್ಷಣ ಅವರನ್ನು ಹೊಸನಗರದ ಸರ್ಕಾರಿ ಆಸ್ಪತ್ರೆಗೆ ಕರೆತರಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *