ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯುವ ಮುನ್ಸೂಚನೆ ಇದ್ದು, ಭಾರತೀಯ ಹವಾಮಾನ ಇಲಾಖೆಯು (IMD) ಪ್ರಮುಖ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಜೂನ್ 4 ರಿಂದ ಜೂನ್ 10 ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಅದೇ ರೀತಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 5 ರಂದು ಒಂದು ಅಥವಾ ಎರಡು ಸ್ಥಳಗಳಲ್ಲಿ ತೀವ್ರ ಮಳೆಯಾಗುವ ನಿರೀಕ್ಷೆಯಿದೆ.
ಈ ಅವಧಿಯಲ್ಲಿ ಸಾಮಾನ್ಯ 64.5 ಮಿಲಿಮೀಟರ್‌ನಿಂದ 115.4 ಮಿಲಿಮೀಟರ್‌ವರೆಗೆ ಮಳೆಯಾಗಲಿದ್ದು, ಕೆಲವೆಡೆ 115.5 ಮಿಲಿಮೀಟರ್‌ನಿಂದ 204.4 ಮಿಲಿಮೀಟರ್‌ವರೆಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ ತಿಳಿಸಿದೆ. ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಪ್ರದೇಶಗಳಿಗೆ ಅಧಿಕೃತವಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ.

ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆ ಹಾಗೂ ವಾಹನ ಸಂಚಾರಕ್ಕೆ ಅಡಚಣೆಯಾಗುವ ಅಪಾಯ ಇರುವುದರಿಂದ, ಸಾರ್ವಜನಿಕರು ಮಳೆಗಾಲದ ತೀವ್ರ ಮುನ್ನೆಚ್ಚರಿಕೆ ವಹಿಸುವಂತೆ ಸರ್ಕಾರ ಮತ್ತು ಹವಾಮಾನ ಇಲಾಖೆ ವಿನಂತಿಸಿವೆ. ಅತ್ಯಗತ್ಯ ಕೆಲಸಗಳಿದ್ದರಷ್ಟೇ ಜನರು ಮನೆಯಿಂದ ಹೊರಬರುವಂತೆ ಹಾಗೂ ಪ್ರವಾಹ ಪೀಡಿತ ಪ್ರದೇಶಗಳತ್ತ ತೆರಳದಂತೆ ಸೂಚಿಸಲಾಗಿದೆ.



Leave a Reply