ರಾಜ್ಯ ಸರ್ಕಾರವು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಹಿರಿಯ ಕೆಎಎಸ್ (KAS) ಅಧಿಕಾರಿಯೊಬ್ಬರನ್ನು ಉಪ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯಾಗಿ (Personal Secretary) ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಸೂಪರ್ ಟೈಂ ಸ್ಕೇಲ್ (Super Time Scale) ಶ್ರೇಣಿಯ ಕೆಎಎಸ್ ಅಧಿಕಾರಿಯಾಗಿರುವ ಡಾ. ಚನ್ನಬಸಪ್ಪ ಕೆ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಾನ್ಯ ಉಪ ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ ಹುದ್ದೆಗೆ ನೇಮಿಸಲಾಗಿದೆ. ಮಾನ್ಯ ಉಪ ಮುಖ್ಯಮಂತ್ರಿಯವರ ಪದಾವಧಿಯವರೆಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ (ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ) ಈ ನೇಮಕಾತಿಯು ಜಾರಿಯಲ್ಲಿರುತ್ತದೆ ಎಂದು ಸರ್ಕಾರದ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಸೇವೆಗಳು-2) ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಹೆಚ್. ಅವರು ಜೂನ್ 09, 2026 ರಂದು ಈ ಅಧಿಕೃತ ಅಧಿಸೂಚನೆಯನ್ನು (ಸಂಖ್ಯೆ: ಸಿಆಸುಇ 52 ಆಸೇವ 2026) ಹೊರಡಿಸಿದ್ದಾರೆ.



Leave a Reply