Bidadi Township | ರೈತರ ವಿರೋಧದ ನಡುವೆಯೂ ಬಿಡದಿ ಟೌನ್ ಶಿಪ್ ಅಂತಿಮ ಅಧಿಸೂಚನೆ ಪ್ರಕಟ!

ಹಂಚಿಕೊಳ್ಳಿ

ರಾಮನಗರ: ಜಿಲ್ಲೆಯ ಬಿಡದಿ ಬಳಿ ಪ್ರಸ್ತಾವಿತ ‘ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್’ (GBIT) ಯೋಜನೆಗೆ ಸ್ಥಳೀಯ ರೈತರ ತೀವ್ರ ವಿರೋಧ ಹಾಗೂ ಪ್ರತಿಭಟನೆಗಳ ನಡುವೆಯೂ ರಾಜ್ಯ ನಗರಾಭಿವೃದ್ಧಿ ಇಲಾಖೆಯು ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಯ ಪ್ರಮುಖ 3 ಗ್ರಾಮಗಳ ಒಟ್ಟು 518 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿದ್ದು, ಜಮೀನು ಕಳೆದುಕೊಳ್ಳುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ ₹2.14 ಕೋಟಿ ಪರಿಹಾರದ ದರವನ್ನು ನಿಗದಿಪಡಿಸಲಾಗಿದೆ.

ಮೊದಲ ಹಂತದ ಈ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಕೆಂಪಯ್ಯನಪಾಳ್ಯ, ಮಂಡಲಹಳ್ಳಿ ಹಾಗೂ ವಡೇರಹಳ್ಳಿ ಗ್ರಾಮಗಳ ಜಮೀನುಗಳು ಒಳಪಟ್ಟಿದ್ದು, ರೈತರು ತಮ್ಮ ಆಸ್ತಿಯ ಸೂಕ್ತ ದಾಖಲೆಗಳನ್ನು ಸಲ್ಲಿಸಿ ನಿಗದಿತ ಪರಿಹಾರ ಮೊತ್ತವನ್ನು ಪಡೆದುಕೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಈ ಹೈಪ್ರೊಫೈಲ್ ಟೌನ್‌ಶಿಪ್ ಯೋಜನೆಗೆ ರಾಜಕೀಯ ವಲಯ ಹಾಗೂ ರೈತ ಸಂಘಟನೆಗಳಿಂದ ಭಾರಿ ವಿರೋಧ ವ್ಯಕ್ತವಾಗುತ್ತಿದ್ದರೂ, ಸರ್ಕಾರ ಮಾತ್ರ ಭೂಸ್ವಾಧೀನ ಪ್ರಕ್ರಿಯೆಯನ್ನು ಅಧಿಕೃತವಾಗಿ ಚುರುಕುಗೊಳಿಸಿದೆ.

Leave a Reply

Your email address will not be published. Required fields are marked *

Advertisement


This will close in 3 seconds