ಶಿರಸಿ: ಕರ್ನಾಟಕ ವಿಶ್ವವಿದ್ಯಾಲಯ ನಡೆಸಿದ ಫೆಬ್ರವರಿ/ಮಾರ್ಚ್ 2026ರ ಎಂ.ಕಾಂ. ಮೂರನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ನಗರದ ಎಂ.ಇ.ಎಸ್. ವಾಣಿಜ್ಯ ಮಹಾವಿದ್ಯಾಲಯದ (ಸ್ನಾತಕೋತ್ತರ ವಿಭಾಗ) ವಿದ್ಯಾರ್ಥಿಗಳು ಶೇ.100 ಫಲಿತಾಂಶ ದಾಖಲಿಸಿ ಸಾಧನೆ ಮಾಡಿದ್ದಾರೆ.
ಪರೀಕ್ಷೆಯಲ್ಲಿ ಬುಶ್ರಾ ಕಲಬುರ್ಗಿ ಶೇ.79.14 ಅಂಕಗಳೊಂದಿಗೆ ಪ್ರಥಮ ಸ್ಥಾನ, ಭಾರ್ಗವಿ ವಿ. ಭಾವಿಕಟ್ಟಿ ಶೇ.78.00 ಅಂಕಗಳೊಂದಿಗೆ ದ್ವಿತೀಯ ಸ್ಥಾನ, ರಕ್ಷಿತಾ ಜಿ. ನಾಯ್ಕ ಶೇ.76.29 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ವಿನುತಾ ವಿ. ಭಟ್ ಶೇ.75.57 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಹಾಗೂ ಸುಜ್ಞಾ ಟಿ. ಹೆಗಡೆ ಶೇ.75.29 ಅಂಕಗಳೊಂದಿಗೆ ಐದನೇ ಸ್ಥಾನ ಗಳಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಮೊಡರ್ನ್ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಜಿ.ಎಂ. ಹೆಗಡೆ ಮುಳಖಂಡ, ಗೌರವ ಪ್ರಧಾನ ಕಾರ್ಯದರ್ಶಿ ಎಸ್.ಪಿ. ಶೆಟ್ಟಿ, ವಾಣಿಜ್ಯ ಮಹಾವಿದ್ಯಾಲಯದ ಉಪಸಮಿತಿ ಅಧ್ಯಕ್ಷ ವರೀಂದ್ರ ಕಾಮತ್, ಪ್ರಾಚಾರ್ಯ ಡಾ. ವಿ.ಆರ್. ಭಟ್ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಎಂ.ಕಾಂ. ಮೂರನೇ ಸೆಮಿಸ್ಟರ್ ಫಲಿತಾಂಶ: ಎಂ.ಇ.ಎಸ್. ವಾಣಿಜ್ಯ ಮಹಾವಿದ್ಯಾಲಯಕ್ಕೆ ಶೇ.100 ಸಾಧನೆ










Leave a Reply