ರಾಜ್ಯದಲ್ಲಿ 2.60 ಲಕ್ಷ HIV ಸೋಂಕಿತರು: ದೇಶದಲ್ಲೇ 3ನೇ ಸ್ಥಾನ ಪಡೆದ ಕರ್ನಾಟಕ! ಕಾಲೇಜು ಮಕ್ಕಳಿಗೆ ಖಡ್ಡಾಯ HIV ಟೆಸ್ಟ್!!!!! ????

ಹಂಚಿಕೊಳ್ಳಿ

ಬೆಂಗಳೂರು: ರಾಜ್ಯದ ಯುವಜನರಲ್ಲಿ ಹೆಚ್‌ಐವಿ (HIV) ಸೋಂಕು ಹೆಚ್ಚಾಗುತ್ತಿರುವುದನ್ನು ತಡೆಗಟ್ಟಲು ಮತ್ತು ಆರಂಭಿಕ ಹಂತದಲ್ಲೇ ಚಿಕಿತ್ಸೆ ನೀಡುವ ಉದ್ದೇಶದಿಂದ, ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯದ ಎಲ್ಲಾ ಪದವಿ ಹಾಗೂ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ತಪಾಸಣೆಯನ್ನು ಕಡ್ಡಾಯಗೊಳಿಸಲು ಗಂಭೀರ ಚಿಂತನೆ ನಡೆಸಿದೆ??.

ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (NACO) ಬಿಡುಗಡೆ ಮಾಡಿರುವ ಇತ್ತೀಚಿನ ಆತಂಕಕಾರಿ ವರದಿಯ ಹಿನ್ನೆಲೆಯಲ್ಲಿ ಸರ್ಕಾರ ಈ ಮಹತ್ವದ ಕ್ರಮಕ್ಕೆ ಮುಂದಾಗಿದೆ. ವರದಿಯ ಪ್ರಕಾರ, ದೇಶದಲ್ಲೇ ಅತಿ ಹೆಚ್ಚು ಹೆಚ್‌ಐವಿ ಸೋಂಕಿತರಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಪ್ರಸ್ತುತ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಸದ್ಯ ಸುಮಾರು 2.60 ಲಕ್ಷ ಹೆಚ್‌ಐವಿ ಸೋಂಕಿತರಿದ್ದು, ಅವರಲ್ಲಿ 2.05 ಲಕ್ಷ ಮಂದಿ ಮಾತ್ರ ಚಿಕಿತ್ಸೆ (ART) ಪಡೆಯುತ್ತಿದ್ದಾರೆ. ಇನ್ನುಳಿದ ಸುಮಾರು 54,000 ಕ್ಕೂ ಹೆಚ್ಚು ಜನರಿಗೆ ತಮಗೆ ಸೋಂಕು ಇರುವುದೇ ತಿಳಿದಿಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ.


ವಿಶೇಷವಾಗಿ 18 ರಿಂದ 35 ವರ್ಷದೊಳಗಿನ ಯುವಜನರಲ್ಲಿ ಸೋಂಕು ವೇಗವಾಗಿ ಹರಡುತ್ತಿದ್ದು, ಸದ್ಯ 18-25 ವರ್ಷದೊಳಗಿನ ಸುಮಾರು 7,000 ಯುವಕರಲ್ಲಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಹಂತದಲ್ಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ನಿರ್ಧರಿಸಿದೆ.ಕ್ಯೂಆರ್ ಕೋಡ್ ಮೂಲಕ ಗೌಪ್ಯತೆ ರಕ್ಷಣೆ:ಆರೋಗ್ಯ ಇಲಾಖೆಯು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳ ಸಹಯೋಗದಲ್ಲಿ ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ “ಸಮಗ್ರ ಆರೋಗ್ಯ ಶಿಬಿರಗಳನ್ನು” (Integrated Health Camps) ಆಯೋಜಿಸಿ ಉಚಿತ ರಕ್ತ ತಪಾಸಣೆ ಮತ್ತು ಆಪ್ತ ಸಮಾಲೋಚನೆ ನಡೆಸಲಿದೆ. ವಿದ್ಯಾರ್ಥಿಗಳ ಗೌಪ್ಯತೆಯನ್ನು ಕಾಪಾಡುವ ಉದ್ದೇಶದಿಂದ “ನಿಮ್ಮ ಹೆಚ್‌ಐವಿ ಸ್ಥಿತಿ ತಿಳಿದುಕೊಳ್ಳಿ” (Know Your Status) ಎಂಬ ಕ್ಯೂಆರ್ ಕೋಡ್ ಆಧಾರಿತ ಸ್ವಯಂ ಅಪಾಯ ಮೌಲ್ಯಮಾಪನ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ. ಇದರ ಮೂಲಕ ವಿದ್ಯಾರ್ಥಿಗಳು ತಮ್ಮ ಅಪಾಯದ ಮಟ್ಟವನ್ನು ಯಾರಿಗೂ ತಿಳಿಯದಂತೆ ಗೌಪ್ಯವಾಗಿ ಪರಿಶೀಲಿಸಿಕೊಳ್ಳಬಹುದು.ಯುವ ಪೀಳಿಗೆಯ ಆರೋಗ್ಯ ರಕ್ಷಣೆಗಾಗಿ ಹಮ್ಮಿಕೊಂಡಿರುವ ಈ ವಿಶೇಷ ಅಭಿಯಾನಕ್ಕೆ ಆಯಾ ಕಾಲೇಜುಗಳ ಪ್ರಾಂಶುಪಾಲರು, ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಸಹಕರಿಸಬೇಕೆಂದು ಆರೋಗ್ಯ ಇಲಾಖೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *