ಶಿರಸಿ: ತಾಲೂಕಿನ ಕಾನಗೋಡ ಗ್ರಾಮದ ಅರಣ್ಯ ಸರ್ವೆ ನಂ. 241ರಲ್ಲಿ ಅನಧಿಕೃತವಾಗಿ ಶ್ರೀಗಂಧದ ತುಂಡುಗಳನ್ನು ಕೆತ್ತನೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆ ದಾಳಿ ನಡೆಸಿ, 33.390 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದೆ.
ತಾಲೂಕಿನ ಕಾನಗೋಡ ಗ್ರಾಮದ ಜನತಾ ಕಾಲೋನಿಯ ನಿವಾಸಿ ದಯಾನಂದ ನಾರಾಯಣ ನಾಯ್ಕ (48) ಎಂಬಾತನನ್ನು ಬಂಧಿಸಲಾಗಿದೆ. ಪ್ರಕರಣದ ಎರಡನೇ ಆರೋಪಿ ಹೊಳೆಕೈ ಮಶಿಗದ್ದೆ ಗ್ರಾಮದ ಮಂಜುನಾಥ ಅಣ್ಣಪ್ಪ ದೇವಾಡಿಗ (47), ಪರಾರಿಯಾಗಿದ್ದು, ಆತನ ಪತ್ತೆಗೆ ಅರಣ್ಯ ಇಲಾಖೆ ಶೋಧ ಕಾರ್ಯ ಮುಂದುವರಿಸಿದೆ.
ದಾಳಿಯ ವೇಳೆ ಆರೋಪಿಗಳಿಂದ 33.390 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ಶಿರಸಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಹೆಚ್. ಸೂರ್ಯವಂಶಿ ಹಾಗೂ ಶಿರಸಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಮಿತ್‌ಕುಮಾರ್ ಚವ್ಹಾಣ ಮಾರ್ಗದರ್ಶನದಲ್ಲಿ ಶಿರಸಿ ವಲಯ ಅರಣ್ಯಾಧಿಕಾರಿ ಭವ್ಯಾ ನಾಯ್ಕ ನೇತೃತ್ವದಲ್ಲಿ
ಉಪ ವಲಯ ಅರಣ್ಯಾಧಿಕಾರಿ ಕಾರ್ತಿಕ್ ನಾರ್ವೆಕರ ಹಾಗೂ ಅರಣ್ಯ ಪಾಲಕರಾದ ರೋಹಿತ ಎಂ. ನಾಯ್ಕ, ಮಂಜುನಾಥ ಜಹಾಗೀರದಾರ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಪಾಲ್ಗೊಂಡಿದ್ದರು.
ಶ್ರೀಗಂಧ ಕೆತ್ತಲು ಹೋಗಿ, ಅರಣ್ಯ ಇಲಾಖೆಯಿಂದ ತಮ್ಮದೇ ಭವಿಷ್ಯ ಕೆತ್ತಿಸಿಕೊಂಡ ಖದೀಮರು! ಓದಿ ಈ ವರದಿ











Leave a Reply