
ಯಲ್ಲಾಪುರ: ಇಲ್ಲಿನ ಪೊಲೀಸ್ ಠಾಣೆಯ ನೂತನ ಪೊಲೀಸ್ ನಿರೀಕ್ಷಕರಾಗಿ (ಸಿಪಿಐ) ಸುರೇಶ ಜಿ. ಕುಂಬಾರ್ ಗುರುವಾರ ಅಧಿಕಾರ ಸ್ವೀಕರಿಸಿದರು.
ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು, ತಾಲೂಕಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಮೊದಲ ಆದ್ಯತೆ ನೀಡುವುದಾಗಿ ತಿಳಿಸಿದರು.
ನೂತನ ಪೊಲೀಸ್ ನಿರೀಕ್ಷಕರಾದ ಸುರೇಶ ಜಿ. ಕುಂಬಾರ್ ಅವರು ಈ ಹಿಂದೆ ಹುಬ್ಬಳ್ಳಿ, ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿದ್ದು, ಸುದೀರ್ಘ ಸೇವೆಯ ಅನುಭವ ಹೊಂದಿದ್ದಾರೆ. ಇವರ ದಕ್ಷ ಕಾರ್ಯವೈಖರಿಗೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರಶಂಸೆ ವ್ಯಕ್ತವಾಗಿದೆ. ಈ ಹಿಂದೆ ಯಲ್ಲಾಪುರ ಸಿ ಪಿ ಐ ಆಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿದ್ದ ರಮೇಶ ಹಾನಾಪುರ ಮುಂಡಗೋಡ ಠಾಣೆಗೆ ವರ್ಗಾವಣೆ ಆಗಿತ್ತು. ಕೆಲ ತಿಂಗಳಿಂದ ಯಲ್ಲಾಪುರ ಪೊಲೀಸ್ ಠಾಣೆಗೆ ಸಿ ಪಿ ಐ ಇರಲಿಲ್ಲ. ಈಗ ಯಲ್ಲಾಪುರ ಪೊಲೀಸ್ ಠಾಣೆಗೆ ಸಿ ಪಿ ಐ ಎಂಟ್ರಿ ಅಕ್ರಮ ದಂಧೆಕೊರರಿಗೆ ಮತ್ತೆ ನಡುಕ ಹುಟ್ಟಿಸಿದೆ.















Leave a Reply