
ಯಲ್ಲಾಪುರ: ಇಲ್ಲಿನ ಪಟ್ಟಣದ ವ್ಯಾಪ್ತಿಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 52ರ ಗೇರಗದ್ದೆ ಕ್ರಾಸ್ ಬಳಿ ಮಂಗಳವಾರ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ತೀವ್ರವಾಗಿ ಜಖಂಗೊಂಡಿದ್ದರೂ, ಅದೃಷ್ಟವಶಾತ್ ಕಾರಿನಲ್ಲಿದ್ದ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳವಾರದಂದು ರಾಷ್ಟ್ರೀಯ ಹೆದ್ದಾರಿ 52ರ ಗೇರಗದ್ದೆ ಕ್ರಾಸ್ ಬಳಿ ವಾಹನಗಳು ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಕೆಎಸ್ಆರ್ಟಿಸಿ ಬಸ್ ಯಲ್ಲಾಪುರದಿಂದ ಅಂಕೋಲಾ ಕಡೆಗೆ ತೆರಳುತ್ತಿತ್ತು. ಕಾರು ಕಣ್ಣಿಮನೆ ಕ್ರಾಸ್ ನಿಂದ ಯಲ್ಲಾಪುರಕ್ಕೆ ಹೊರಡುವ ಸಮಯದಲ್ಲಿ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸವಾರರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಯಲ್ಲಾಪುರ ಪೊಲೀಸರು ಜಖಂಗೊಂಡ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಸ್ಥಳೀಯರ ಮಾಹಿತಿ ಅನುಗುಣವಾಗಿ ವರದಿ ಪ್ರಕಟಿಸಲಾಗಿದೆ. ಹೆಚ್ಚಿನ ವಿಷಯ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ















Leave a Reply