ಅಂಕೋಲಾದಲ್ಲಿ ಕೆಎಸ್‌ಆರ್‌ಟಿಸಿ ಬಸ್–ಲಾರಿ ಮುಖಾಮುಖಿ ಡಿಕ್ಕಿ25ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ; 2 ವರ್ಷದ ಕಂದಮ್ಮ ಸಾವು!

ಹಂಚಿಕೊಳ್ಳಿ


ಅಂಕೋಲಾ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ  ಅಪಘಾತದಲ್ಲಿ ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಎರಡು ವರ್ಷದ ಕಂದಮ್ಮ ಮೃತಪಟ್ಟಿರುವ ಘಟನೆ ಅಂಕೋಲಾ ತಾಲೂಕಿನ ಬೆಳಸೆ ಗ್ರಾಮದ  ಹಂದಿ ಗದ್ದೆ ಪ್ರದೇಶದ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.
ಅಪಘಾತದ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಕುಮಾಟಾ ಕಡೆಯಿಂದ ಅಂಕೋಲಾ ಕಡೆಗೆ ಬಸ್ಸು  ಬರುತ್ತಿತ್ತು ಎನ್ನಲಾಗಿದೆ. ಬಸ್‌ನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ.
ಅಪಘಾತದ ಬಳಿಕ ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ತಕ್ಷಣ ಕಾರವಾರದ  ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಘಟನೆಯ ಕುರಿತು ಹೆಚ್ಚಿನ ವಿವರಗಳು ಹಾಗೂ ಗಾಯಾಳುಗಳ ನಿಖರ ಸಂಖ್ಯೆ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *