ಭಟ್ಕಳದಲ್ಲಿ ಗಾಂಜಾ ವಶ: ಓರ್ವ ಆರೋಪಿತನ ಬಂಧನ

ಹಂಚಿಕೊಳ್ಳಿ


ಭಟ್ಕಳ: ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ, ಆತನಿಂದ 816 ಗ್ರಾಂ ಗಾಂಜಾ ಹಾಗೂ ಸ್ಕೂಟಿ ಸೇರಿದಂತೆ ಒಟ್ಟು ₹81,600 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಅ.02ರಂದು ಸಂಜೆ 6.30ರ ಸುಮಾರಿಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪೊಲೀಸ್ ಸಿಬ್ಬಂದಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಗಾಂಜಾ ಮಾರಾಟಕ್ಕೆ ಮುಂದಾಗಿದ್ದ ಆರೋಪಿತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಕಾರ್ಯಾಚರಣೆಯಲ್ಲಿ ಪಿಎಸ್‌ಐ ದೀಪಕ್ ಎಂ.ಎಸ್., ಮಾನ್ಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಮಾದಕ ವಸ್ತುಗಳ ಅಕ್ರಮ ಸಾಗಾಟ ಮತ್ತು ಮಾರಾಟದ ವಿರುದ್ಧ ಜಿಲ್ಲೆಯಲ್ಲಿ ಮುಂದುವರಿದ ಕಾರ್ಯಾಚರಣೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಪೊಲೀಸ್ ಇಲಾಖೆಯ ಈ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *