ಮುಂಡಗೋಡದಲ್ಲಿ ಹಿಂದೂ ಅಪ್ರಾಪ್ತ ಬಾಲಕಿ ಮೇಲೆ ಮುಸ್ಲಿಂ ವೃದ್ಧನಿಂದ ಅತ್ಯಾಚಾರ ಆರೋಪ; ಎರಡು ತಿಂಗಳ ಗರ್ಭಿಣಿಯಾದ ಬಾಲಕಿ?

ಹಂಚಿಕೊಳ್ಳಿ


ಮುಂಡಗೋಡ: ತಾಲೂಕಿನ ಗ್ರಾಮವೊಂದರಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 65 ವರ್ಷದ ವೃದ್ಧನೊಬ್ಬ ಅತ್ಯಾಚಾರ ಎಸಗಿದ್ದು, ಬಾಲಕಿ ಎರಡು ತಿಂಗಳ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಇಸ್ಮಾಯಿಲ್ ಸಾಬ್  (65) ಎಂಬಾತ ಬಾಲಕಿಯನ್ನು ಪುಸಲಾಯಿಸಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.  ಪೊಲೀಸ್ ತನಿಖೆಯ ಸಂದರ್ಭದಲ್ಲಿ ಆರೋಪಿ ಹಲವು ಬಾರಿ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ . ಯಾವುದೇ ಪೊಲೀಸ್ ಅಧಿಕೃತ ಪ್ರಕಟಣೆ ನೀಡಿಲ್ಲ. ಘಟನೆಯಿಂದಾಗಿ ಸ್ಥಳೀಯವಾಗಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.


ವಕೀಲ ಸಮುದಾಯಕ್ಕೆ ಹರಿಪ್ರಕಾಶ ಕೋಣೆಮನೆ ಮನವಿ
ಈ ಅಮಾನವೀಯ ಕೃತ್ಯವನ್ನು ಖಂಡಿಸಿರುವ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಅವರು, ಇಂತಹ ಹೇಯ ಕೃತ್ಯ ಎಸಗಿರುವ ಆರೋಪಿಯ ಪರವಾಗಿ ಉತ್ತರ ಕನ್ನಡ ಜಿಲ್ಲೆ ಅಥವಾ ರಾಜ್ಯದ ಯಾವುದೇ ವಕೀಲರು ವಕಾಲತ್ತು ವಹಿಸಬಾರದು ಎಂದು ವಕೀಲ ಸಮುದಾಯಕ್ಕೆ ಮನವಿ ಮಾಡಿದ್ದಾರೆ.
ಮನುಕುಲವೇ ತಲೆತಗ್ಗಿಸುವ ಇಂತಹ ಕೃತ್ಯಗಳ ವಿರುದ್ಧ ಸಮಾಜ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು ಎಂದು ಅವರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *