
ಯಲ್ಲಾಪುರ : ಕಿರವತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡುಂದರ ಗೌಳಿ ವಾಡದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ರವಿವಾರ ಆಯೋಜಿಸಲಾದ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ವಿಜಯ ಮಿರಾಶಿ ಅವರು ದೀಪ ಬೆಳಗಿಸಿ, ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಜಯ ಮಿರಾಶಿ, ಕ್ರೀಡೆ ಯುವಜನರಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದ ಒಗ್ಗಟ್ಟನ್ನು ಬೆಳೆಸುತ್ತದೆ. ಗ್ರಾಮೀಣ ಭಾಗಗಳಲ್ಲಿ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ಸ್ಥಳೀಯ ಪ್ರತಿಭೆಗಳಿಗೆ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳಲು ಉತ್ತಮ ಅವಕಾಶ ದೊರೆಯುತ್ತದೆ. ಯುವಕರು ಕ್ರೀಡೆಯನ್ನು ಆಸಕ್ತಿಯಿಂದ ಸ್ವೀಕರಿಸಿ ಸಾಧನೆಯತ್ತ ಮುನ್ನಡೆಯಬೇಕು ಎಂದರು.

ಈ ಸಂದರ್ಭದಲ್ಲಿ ಸಾಮಾಜಿಕ ಮುಖಂಡರಾದ ರೆಹಮತ್ ಅಬ್ಬಿಗೇರಿ ಮಾತನಾಡಿ, ಕಬಡ್ಡಿಯಂತಹ ಗ್ರಾಮೀಣ ಕ್ರೀಡೆಗಳು ನಮ್ಮ ನಾಡಿನ ಕ್ರೀಡಾ ಸಂಸ್ಕೃತಿಯ ಪ್ರತೀಕವಾಗಿವೆ. ಇಂತಹ ಪಂದ್ಯಾವಳಿಗಳು ಯುವಕರಲ್ಲಿ ಕ್ರೀಡಾಸಕ್ತಿ ಮೂಡಿಸುವುದರ ಜೊತೆಗೆ ಪರಸ್ಪರ ಸ್ನೇಹ, ಸಹಕಾರ ಮತ್ತು ಕ್ರೀಡಾ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ. ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದ ಆಯೋಜಕರು ವಿಜಯ ಮಿರಾಶಿ ಅವರನ್ನು ಗೌರವಿಸಿ ಅಭಿನಂದಿಸಿದರು.
















Leave a Reply