Shubha Poonja | 4 ವರ್ಷಗಳ ದಾಂಪತ್ಯಕ್ಕೆ ಅಂತ್ಯ? ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ..!

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟಿ ಶುಭಾ ಪೂಂಜಾ (Shubha Poonja) ಅವರ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದ್ದು, ಸದ್ಯ ಅವರು ತಮ್ಮ ಪತಿಯಿಂದ ದೂರವಾಗಲು ನಿರ್ಧರಿಸಿದ್ದಾರೆ. ಉದ್ಯಮಿ ಸುಮಂತ್ ಬಿಲ್ಲವ ಅವರಿಂದ ವಿಚ್ಛೇದನ (Divorce) ಕೊಡಿಸುವಂತೆ ಕೋರಿ ನಟಿ ಶುಭಾ ಪೂಂಜಾ ಅವರು ಕೌಟುಂಬಿಕ ನ್ಯಾಯಾಲಯಕ್ಕೆ (Family Court) ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ.

ನಟಿ ಶುಭಾ ಪೂಂಜಾ ಅವರು ಉಡುಪಿ ಮೂಲದ ಪ್ರಸಿದ್ಧ ಉದ್ಯಮಿಯಾಗಿರುವ ಸುಮಂತ್ ಬಿಲ್ಲವ (Sumanth Billava) ಅವರ ಕೈ ಹಿಡಿದಿದ್ದರು. ದೀರ್ಘಕಾಲದ ಪ್ರೀತಿಯ ಬಳಿಕ ಈ ಜೋಡಿಯು ಕಳೆದ 2022ರ ಜನವರಿ ತಿಂಗಳಲ್ಲಿ ಅತ್ಯಂತ ಸಂಭ್ರಮದಿಂದ ಮದುವೆಯಾಗಿದ್ದರು. ಆದರೆ, ಮದುವೆಯಾದ ಕೇವಲ ನಾಲ್ಕೇ ವರ್ಷಗಳಲ್ಲಿ ದಂಪತಿ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು, ಕೊನೆಗೂ ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ಪಡೆಯಲು ಕೋರ್ಟ್ ಮೆಟ್ಟಿಲೇರಿದ್ದಾರೆ.

ಅದ್ದೂರಿಯಾಗಿ ಸಂಸಾರ ಆರಂಭಿಸಿದ್ದ ಈ ಜೋಡಿಯ ನಡುವೆ ದಿಢೀರನೆ ವಿಚ್ಛೇದನ ಪಡೆಯುವಂತಹದ್ದೇನು ಪರಿಸ್ಥಿತಿ ಎದುರಾಯಿತು ಎಂಬುದು ಸದ್ಯಕ್ಕೆ ನಿಗೂಢವಾಗಿದೆ. ಈ ಕುರಿತು ಮಾಧ್ಯಮಗಳು ಪ್ರಶ್ನಿಸಿದಾಗ, ವಿಚ್ಛೇದನಕ್ಕೆ ಪ್ರಮುಖ ಕಾರಣ ಏನೆಂಬುದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಪತಿ ಸುಮಂತ್ ಬಿಲ್ಲವ ಅವರು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ಶುಭಾ ಪೂಂಜಾ ಹಾಗೂ ಸುಮಂತ್ ಅವರ ವಿಚ್ಛೇದನದ ಅರ್ಜಿ ಈಗಾಗಲೇ ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿದ್ದು, ಕಾನೂನು ಪ್ರಕ್ರಿಯೆಗಳು ಆರಂಭವಾಗಿವೆ. ಇನ್ನುಳಿದಂತೆ ಕೋರ್ಟ್ ಅರ್ಜಿಯನ್ನು ಪರಿಶೀಲಿಸುತ್ತಿದ್ದು, ಮುಂದಿನ ವಿಚಾರಣೆಯ (Next Hearing) ಸಂದರ್ಭದಲ್ಲಿ ಶುಭಾ ಪೂಂಜಾ ಹಾಗೂ ಸುಮಂತ್ ಇಬ್ಬರೂ ಕಡ್ಡಾಯವಾಗಿ ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗುವ ಸಾಧ್ಯತೆ ದಟ್ಟವಾಗಿದೆ. ಸ್ಯಾಂಡಲ್‌ವುಡ್‌ನ ಸಾಲು ಸಾಲು ಡಿವೋರ್ಸ್ ಪ್ರಕರಣಗಳ ಪಟ್ಟಿಗೆ ಈಗ ಶುಭಾ ಪೂಂಜಾ ಹೆಸರು ಸೇರ್ಪಡೆಯಾಗಿರುವುದು ಅವರ ಅಭಿಮಾನಿಗಳಿಗೆ ತೀವ್ರ ಬೇಸರ ಮೂಡಿಸಿದೆ.

Leave a Reply

Your email address will not be published. Required fields are marked *